




ಒಡಿಯೂರು ಶ್ರೀ ಗುರುದೇವ ಐ.ಟಿ.ಐ. ಯಲ್ಲಿ ಆಯೋಜಿಸಲಾದ ಇಂಜಿನಿಯರ್‍ಸ್ ಡೇ ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಚಾರ್ಯ ಪ್ರವೀಣ್ ಕುಮಾರ್ ಎನ್.ರವರು ದೀಪೋಜ್ವಲನೆಗೈದು ಸರ್ ಎಂ. ವಿಶ್ವೇಶ್ವರಯ್ಯರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ ಸರ್ ಎಂ. ವಿಶ್ವೇಶ್ವರಯ್ಯರವರ ಬಾಲ್ಯ ಜೀವನ ಹಾಗೂ ಇಂಜಿನಿಯರಿಂಗ್ ವಿಭಾಗದಲ್ಲಿ ನೀಡಿದ ಕೊಡುಗೆಯನ್ನು ವಿವರಿಸುತ್ತಾ ಅವರ ಜೀವನದ ಮೌಲ್ಯಯುತ ಆದರ್ಶ ಗುಣಗಳನ್ನು ನಾವು ಪಾಲಿಸೋಣ, ತನ್ಮೂಲಕ ದೇಶ ಕಟ್ಟುವ ಕೆಲಸದಲ್ಲಿ ನಾವು ನೀವೆಲ್ಲರೂ ಭಾಗಿಗಳಾಗೋಣ ಎಂದು ಕರೆ ನೀಡಿದರು.
ವೇದಿಕೆಯಲ್ಲಿ ಸಂಸ್ಥೆಯ ಕಿರಿಯ ತರಬೇತಿ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಇಂಜಿನಿಯರ‍್ಸ್ ಡೇ ನಿಮಿತ್ತ ವಿವಿಧ ಆಟೋಟ ಸ್ಪರ್ಧೆಗಳನ್ನು ನಡೆಸಲಾಗಿದ್ದು ವಿಜೇತ ವಿದ್ಯಾರ್ಥಿಗಳಿಗೆ ಈ ಸಭಾ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಗಳಾದ ಲಿಖಿತ್ ರಾಜ್ ಸ್ವಾಗತಿಸಿ, ಶ್ರವಣ್ ಕುಮಾರ್ ವಂದಿಸಿದರು. ಸುಧೀರ್ ಕಾರ್ಯಕ್ರಮ ನಿರೂಪಿಸಿದರು.