- Advertisement -
- Advertisement -




ಮೊದಲ ಹಂತದ ಚುನಾವಣೆ ಮಗಿದಿದೆ. ಇನ್ನು 6 ಹಂತದ ಚುನಾವಣೆ ಬಾಕಿ ಇದೆ. ಫಲಿತಾಂಶ ಜೂನ್ 4ರಂದು ಘೋಷಣೆಯಾಗಲಿದೆ. ಆದರೆ ಫಲಿತಾಂಶಕ್ಕೂ ಮುನ್ನವೇ ಬಿಜೆಪಿ ಮುನ್ನಡೆ ಸಾಧಿಸಿದೆ. ಸೂರತ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸೂರತ್: ಲೋಕಸಭಾ ಚುನಾವಣೆ ಪ್ರಚಾರ ನಡೆಯುತ್ತಿದೆ. ಮೊದಲ ಹಂತದ ಚುನಾವಣೆ ಮುಗಿದಿದ್ದು, ಇನ್ನೂ 6 ಹಂತದ ಚುನಾವಣೆ ಬಾಕಿ ಇದೆ. ಮೊದಲ ಹಂತದ ಚುನಾವಣೆ ಬಳಿಕ ಬಿಜೆಪಿ, ಕಾಂಗ್ರೆಸ್ ಹಾಗೂ ಇತರ ಪಕ್ಷಗಳ ನಡುವೆ ವಾಕ್ಸಮರ ಹೆಚ್ಚಾಗಿದೆ. ಮೊದಲ ಹಂತದ ಚುನಾವಣೆಯಲ್ಲಿ ಜನ ಬಿಜೆಪಿಗೆ ಮತ ಹಾಕಿದ್ದಾರೆ ಎಂದು ಬಿಜೆಪಿ ಹೇಳಿಕೊಂಡರೆ, ಇಂಡಿಯಾ ಒಕ್ಕೂಟ ಎಂದು ಕಾಂಗ್ರೆಸ್ ಹೇಳುತ್ತಿದೆ. ಆದರೆ ಚುನಾವಣಾ ಫಲಿತಾಂಶಕ್ಕೂ ಮೊದಲೇ ಬಿಜೆಪಿ ಭರ್ಜರಿ ಗೆಲುವು ಸಿಕ್ಕಿದೆ. ಸೂರತ್ ಬಿಜೆಪಿ ಅಭ್ಯರ್ಥಿ ಮುಕೇಶ್ ದಲಾಲ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
- Advertisement -