Friday, March 29, 2024
spot_imgspot_img
spot_imgspot_img

ಎಲ್ಲಾ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಆರಂಭಿಸಿ:ಮಂಗಳೂರು ಮಾಜಿ ಮೇಯರ್ ಕವಿತಾ ಸನಿಲ್ ಸರ್ಕಾರಕ್ಕೆ ಆಗ್ರಹ.

- Advertisement -G L Acharya panikkar
- Advertisement -

ಮಂಗಳೂರು:ಭಕ್ತರ ಹಾಗೂ ಅರ್ಚಕರ ಹಿತದೃಷ್ಟಿಯಿಂದ ಸರ್ಕಾರ ಕೂಡಲೇ ಎಲ್ಲಾ ದೇವಸ್ಥಾನಗಳಲ್ಲಿ ವಿಶೇಷ ಪೂಜಾ ಸೇವೆಗಳನ್ನು ಆರಂಭಿಸಬೇಕು ಎಂದು ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್, ಕಾಂಗ್ರೆಸ್ ಮುಖಂಡೆ ಕವಿತಾ ಸನಿಲ್ ಆಗ್ರಹಿಸಿದ್ದಾರೆ.


ಮಂಗಳೂರಲ್ಲಿ ಮಾತನಾಡಿದ ಅವರು, ಕರಾವಳಿಯಲ್ಲಿ ಸಾಕಷ್ಟು ದೇಗುಲಗಳಿವೆ,ಅದರಲ್ಲೂ ಇತಿಹಾಸ ಪ್ರಸಿದ್ದ ಕುಕ್ಕೆಸುಬ್ರಹ್ಮಣ್ಯ,ಕಟೀಲು ಸೇರಿದಂತೆ ಎಲ್ಲಾ ದೇವಸ್ಥಾನಗಳಲ್ಲಿ ಕೊರೋನಾದಿಂದಾಗಿ ವಿಶೇಷ ಪೂಜಾ ಸೇವೆಗಳು ನಡೆಯುತ್ತಿಲ್ಲ. ಹೀಗಾಗಿ ದೇಗುಲದ ಅರ್ಚಕರಿಗೆ ತಮ್ಮ ಕಷ್ಟವನ್ನು ಯಾರತ್ರನೂ ಹೇಳಲಾಗುತ್ತಿಲ್ಲ. ಅವರಿಗೆ ದೇವರ ಕೆಲಸ ಬಿಟ್ಟು ಬೇರೆ ಏನೂ ಕೆಲಸ ಮಾಡುವ ಹಾಗಿಲ್ಲ. ಈ ರೀತಿಯ ಪರಿಸ್ಥಿತಿ ಮುಂದುವರಿದರೆ ದೇಗುಲಗಳ ಬಾಗಿಲನ್ನು ಮುಚ್ಚಬೇಕಾದ ಅನಿವಾರ್ಯ ಪರಿಸ್ಥಿತಿ ಬರಬಹುದು.ಇದಕ್ಕೆ ಸರ್ಕಾರ ಅವಕಾಶ ಕೊಡಬಾರದು ಎಂದು ಮನವಿ ಮಾಡಿದ್ದಾರೆ.


ಈಗಾಗಲೇ ಸರಕಾರ ಬಾರ್ ,ವೈನ್ ಶಾಪ್ ಗಳಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ಕಲ್ಪಿಸಿದೆ.ಅದ್ರೆ ಅವರು ಯಾವ ರೀತಿ ಸಾಮಾಜಿಕ ಅಂತರ ಪಾಲಿಸುತ್ತಾರೆ ಎಂಬುದು ಎಲ್ಲರಿಗೂ ಗೊತ್ತು.ಅದ್ದರಿಂದ ದೇವಸ್ಥಾನಗಳಲ್ಲಿ ಸೇವೆಯನ್ನು ಅರಂಭಿಸಿದ್ರೆ ಅರ್ಚಕರ ವೃಂದ, ಅಡಳಿತ ಮಂಡಳಿಯವರು ಸಾಮಾಜಿಕ ಅಂತರ ಕಾಯ್ದುಕೊಂಡು ಕೆಲಸವನ್ನು ನಡೆಸುತ್ತಾರೆ ಎಂಬ ವಿಶ್ವಾಸ ಇದೆ.ಆದ್ದರಿಂದ ಸರಕಾರ ಶೀಘ್ರದಲ್ಲೇ ದೇವಸ್ಥಾನಗಳಲ್ಲಿ ಸೇವೆ ಅರಂಭಿಸಲು ಅವಕಾಶ ಕೊಡಬೇಕೆಂದು ಒತ್ತಾಯಿಸಿದರು.

- Advertisement -

Related news

error: Content is protected !!