- Advertisement -
- Advertisement -
ಮಂಗಳೂರು: ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರೆಯವರ ಕಾರ್ ಅಪಘಾತಕ್ಕೀಡಾದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಘಟನೆಯಲ್ಲಿ ಸುದರ್ಶನ್ ಯಾವುದೇ ಗಾಯಗಳಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಿಜಾರ್ ಸಮೀಪ ಪಾದಚಾರಿಗೆ ಕಾರ್ ಡಿಕ್ಕಿ ಹೊಡೆಯುವುದನ್ನು ತಪ್ಪಿಸಿದ ವೇಳೆ ರಸ್ತೆ ಪಕ್ಕ ಕೆಸರಿಗೆ ಜಾರಿದ ಕಾರ್ ಮುಂಭಾಗದಲ್ಲಿ ಬರುತ್ತಿದ್ದ ವಾಹನಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಮೂಡಬಿದ್ರೆ ಠಾಣಾ ಪೊಲೀಸರು ಭೇಟಿಕೊಟ್ಟು ಪರಿಶೀಲನೆ ನಡೆಸಿದ್ದಾರೆ.
- Advertisement -