- Advertisement -
- Advertisement -
ಕಡಬ:-ಬೈಕ್ ಹಾಗೂ ಮಹೀಂದ್ರಾ ಜೀತೋ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಸೋಮವಾರದಂದು ಕಡಬದಲ್ಲಿ ನಡೆದಿದೆ.
ಗಾಯಾಳು ಸವಾರನನ್ನು ಕಡಬ ಸಮೀಪದ ಮುಳಿಮಜಲು ನಿವಾಸಿ ಅಬ್ದುಲ್ ರಹಿಮಾನ್ ಎಂಬವರ ಪುತ್ರ ಫಯಾಝ್ ಎಂದು ಗುರುತಿಸಲಾಗಿದೆ. ಮರ್ಧಾಳದಿಂದ ಕಡಬ ಕಡೆಗೆ ತೆರಳುತ್ತಿದ್ದ ಬೈಕ್ ಹಾಗೂ ಪಂಜದಿಂದ ಮರ್ಧಾಳ ಕಡೆಗೆ ತೆರಳುತ್ತಿದ್ದ ಮಹೀಂದ್ರಾ ದೋಸ್ತ್ ನಡುವೆ ಢಿಕ್ಕಿ ಸಂಭವಿಸಿದೆ. ಗಾಯಾಳು ಯುವಕನನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
- Advertisement -