Sunday, June 14, 2026
spot_imgspot_img
spot_imgspot_img

ಬಾಂಬ್ ತಯಾರಿಕೆ ವೇಳೆ ಸ್ಫೋಟ, ಓರ್ವ ಸಾವು, ಇನ್ನೋರ್ವ ಗಂಭೀರ!

- Advertisement -
- Advertisement -

ಬಾಂಬ್ ತಯಾರಿಕೆ ವೇಳೆ ಸ್ಫೋಟಗೊಂಡು ಓರ್ವ ಸಾವನ್ನಪ್ಪಿದ್ದು, ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ಕೇರಳದ ಕಣ್ಣೂರು ಜಿಲ್ಲೆಯ ಪಾನೂರಿನ ಬಳಿ ಸಂಭವಿಸಿದೆ.

ವರದಿಗಳ ಪ್ರಕಾರ ಕಣ್ಣೂರು ಜಿಲ್ಲೆಯ ನಿವಾಸಿಗಳಾದ ಶೆರಿನ್ ಎಂಬಾತನು ಸಾವನ್ನಪ್ಪಿದ್ದು, ವಿನೀಶ್ ಗಂಭೀರ ಗಾಯಗೊಂಡಿದ್ದು,ಪ್ರಸ್ತುತ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶುಕ್ರವಾರ ತಡರಾತ್ರಿ ಈ ಘಟನೆ ಸಂಭವಿಸಿದ್ದು, ಕೂಡಲೇ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಓರ್ವ ಮೃತಪಟ್ಟಿದ್ದಾನೆ. ಇನ್ನೋರ್ವನ ಸ್ಥಿತಿ ಚಿಂತಾಜನಕವಾಗಿದ್ದು ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

Related news

error: Content is protected !!