Saturday, September 26, 2026
spot_imgspot_img
spot_imgspot_img

ಬೆಂಗಳೂರು: ಶಾಲೆ ಬಳಿ ಸ್ಫೋಟಕ ವಸ್ತು ಪತ್ತೆ..!

- Advertisement -
- Advertisement -

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಶಾಲೆಯೊಂದರ ಮುಂಭಾಗದಲ್ಲಿ ಸ್ಫೋಟಕ ವಸ್ತುಗಳು ಪತ್ತೆಯಾಗಿದ್ದು, ಇದು ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ.

ಬೆಳ್ಳಂದೂರಿನ ಪ್ರಕ್ರಿಯಾ ಶಾಲೆ ಮುಂಬಾಗದ ಖಾಲಿ ಜಮೀನಿನಲ್ಲಿ , ಜಿಲೆಟಿನ್ ಕಡ್ಡಿ, ಡಿಟೋನೇಟರ್​​ ಹಾಗೂ ಇತರ ಕೆಲವು ಸ್ಫೋಟಕಗಳು ಪತ್ತೆಯಾಗಿದ್ದು, ಆತಂಕಕ್ಕೆ ಕಾರಣವಾಗಿದೆ.

ಮುಂಭಾಗದ ಬಳಿ ಟ್ರಾಕ್ಟರ್ ಒಂದರಲ್ಲಿ ಇದನ್ನು ಶೇಖರಣೆ ಮಾಡಲಾಗಿದ್ದು, ಅಲ್ಲಿ ಕಟ್ಟಡ ನಿರ್ಮಾಣ ಮಾಡುವ ಜಾಗದಲ್ಲಿ ಬಂಡೆಗಳನ್ನು ಅಕ್ರಮವಾಗಿ ಸ್ಫೋಟಿಸಲು ಸ್ಫೋಟಕ ತಂದಿಟ್ಟಿರುವ ಸಾಧ್ಯತೆ ಇದ್ದು, ಬೆಳ್ಳಂದೂರು ಪೊಲೀಸರು ಸ್ವಯಂಪ್ರೇರಿತರಾಗಿ ಕೇಸ್ ದಾಖಲು ಮಾಡಿಕೊಂಡಿದ್ದಾರೆ.

- Advertisement -

Related news

error: Content is protected !!