Tuesday, June 16, 2026
spot_imgspot_img
spot_imgspot_img

ಬಾಬಾ ಸಿದ್ದಿಕಿ ಹತ್ಯೆ ಬಳಿಕ ಬಾಲಿವುಡ್‌ ನಟ ಸಲ್ಮಾನ್ ಖಾನ್‌ಗೆ ಹೆಚ್ಚುವರಿ ಭದ್ರತೆ

- Advertisement -
- Advertisement -

ಮುಂಬೈ: ಬಾಲಿವುಡ್‌ ನಟ ಸಲ್ಮಾನ್ ಖಾನ್‌ ಅವರಿಗೆ ವೈ ಫ್ಲಸ್‌ ಭದ್ರತೆಯನ್ನು ಒದಗಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಸಲ್ಮಾನ್ ಖಾನ್ ಅವರ ಆಪ್ತರಾಗಿದ್ದ ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿ ಅವರ ಹತ್ಯೆಯ ಬಳಿಕ ಈ ಬೆಳವಣಿಗೆ ನಡೆದಿದೆ.

ಸಲ್ಮಾನ್‌ ಖಾನ್‌ಗೆ ಜೀವಬೆದರಿಕೆ ಹಿನ್ನಲೆ ಪೊಲೀಸ್ ಬೆಂಗಾವಲು ವಾಹನ ಈಗ ಸಲ್ಮಾನ್ ಖಾನ್ ಅವರ ವಾಹನದ ಜೊತೆಗೆ ಇರಲಿದೆ. ಎಲ್ಲಾ ಶಸ್ತ್ರಾಸ್ತ್ರಗಳನ್ನು ಬಳಸಲು ತರಬೇತಿ ಪಡೆದ ಪೊಲೀಸ್‌ ಸಿಬ್ಬಂದಿ ಅವರ ಜೊತೆಯಲ್ಲಿದ್ದಾರೆ. ಸಲ್ಮಾನ್ ಖಾನ್ ಅವರು ಚಿತ್ರೀಕರಣಕ್ಕಾಗಿ ಭೇಟಿ ನೀಡುವ ಯಾವುದೇ ಪ್ರದೇಶದ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಗೆ ಅವರ ಇರುವಿಕೆಯ ಬಗ್ಗೆ ಸೂಚನೆ ನೀಡಲಾಗುತ್ತದೆ. ಪೊಲೀಸ್ ತಂಡವು ಶೂಟಿಂಗ್ ಸ್ಥಳವನ್ನು ಮೇಲ್ವಿಚಾರಣೆ ಮಾಡುತ್ತದೆ ಎಂದು ಪೊಲೀಸ್‌ ಮೂಲಗಳು ಮಾಹಿತಿ ನೀಡಿವೆ.

ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಬಾಬಾ ಸಿದ್ದಿಕಿ ಅವರ ಹತ್ಯೆಯ ಹೊಣೆಗಾರಿಕೆಯನ್ನು ವಹಿಸಿಕೊಂಡ ನಂತರ ಸಲ್ಮಾನ್ ಖಾನ್ ಅವರ ಭದ್ರತೆಯನ್ನು ಹೆಚ್ಚಿಸಲಾಗಿದೆ. ಎನ್‌ಸಿಪಿ ನಾಯಕ ಸಲ್ಮಾನ್‌ ಖಾನ್‌ ಅವರ ಜೊತೆ ನಿಕಟ ಸಂಬಂಧವನ್ನು ಹೊಂದಿದ್ದರು. ಕಳೆದ ಹಲವು ವರ್ಷಗಳಿಂದ ಅವರು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ಹಲವಾರು ಬೆದರಿಕೆಗಳನ್ನು ಎದುರಿಸುತ್ತಿದ್ದಾರೆ.

- Advertisement -

Related news

error: Content is protected !!