Monday, April 29, 2024
spot_imgspot_img
spot_imgspot_img

ನಕಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕಾ ಘಟಕ ಪತ್ತೆ – ಇಬ್ಬರ ಬಂಧನ

- Advertisement -G L Acharya panikkar
- Advertisement -

ಹೈದರಾಬಾದ್​​ನಲ್ಲಿ ನಕಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕಾ ಘಟಕ ಪತ್ತೆಯಾಗಿದ್ದು, 2 ಕೋಟಿ ರೂ. ಮೌಲ್ಯದ ಸಾಮಾಗ್ರಿ ವಶಕ್ಕೆ ಪಡೆಯಲಾಗಿದೆ. ಸರ್ಕಾರಿ ಸ್ವಾಮ್ಯದ ಮೈಸೂರು ಸ್ಯಾಂಡಲ್ ಸೋಪ್ ನಕಲಿ ತಯಾರಿಸಿ ಮಾರಾಟ ಮಾಡುತ್ತಿದ್ದ ಜಾಲ. ನಕಲಿ ಉತ್ಪನ್ನ, ಪ್ಯಾಕಿಂಗ್​ಗೆ ಬಳಸುತ್ತಿದ್ದ ಕಾರ್ಟನ್ ಬಾಕ್ಸ್ ಸೇರಿದಂತೆ ಸಾಮಾಗ್ರಿಗಳು ಪತ್ತೆಯಾಗಿವೆ. ಹೈದರಾಬಾದಿನ ರಾಕೇಶ್ ಜೈನ್ ಮತ್ತು ಮಹಾವೀರ್ ಜೈನ್ ಎಂಬುವರ ಬಂಧಿಸಲಾಗಿದ್ದು, ಮಾಲಕಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.

ನಕಲಿ ಮೈಸೂರ್ ಸ್ಯಾಂಡಲ್ ಸಾಬೂನು ಹೈದರಾಬಾದ್ ಮಾರುಕಟ್ಟೆಗೆ ಪೂರೈಕೆಯಾಗುತ್ತಿರುವ ಬಗ್ಗೆ ಸಚಿವ ಎಂಬಿ. ಪಾಟೀಲ್​​ಗೆ ಅನಾಮಧೇಯ ಕರೆ ಬಂದಿದೆ. ಆ ಮೂಲಕ ಕಾರ್ಖಾನೆ ಎಂಡಿ ಡಾ. ಪ್ರಶಾಂತ್​ಗೆ ನಿಗಾ ವಹಿಸಲು ಸೂಚಿಸಿದ್ದಾರೆ.

ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಹೆಚ್ಚಿನ ಬೇಡಿಕೆ ಇದೆ ಎಂಬ ಕಾರಣ ಕೊಟ್ಟು 25 ಲಕ್ಷ ರೂ. ಬೆಲೆಯ ಸೋಪ್ ಖರೀದಿಗೆ ಕೆಎಸ್​ಡಿಎಲ್ ಸಿಬ್ಬಂದಿ ಆರ್ಡರ್ ಕೊಟ್ಟಿದ್ದರು. ಸ್ವತಃ ತಾವೇ ವಾಹನದಲ್ಲಿ ಸಾಗಿಸುವ ನೆಪದಲ್ಲಿ ಉತ್ಪಾದನೆ ಮಾಡುತ್ತಿದ್ದ ಸ್ಥಳಕ್ಕೆ ತೆರಳಿ ಪತ್ತೆ ಹಚ್ಚಿದ್ದಾರೆ.

- Advertisement -

Related news

error: Content is protected !!