Friday, June 5, 2026
spot_imgspot_img
spot_imgspot_img

ಕೌಟುಂಬಿಕ ಕಲಹ; ಪತ್ನಿಯ ಕತ್ತು ಸೀಳಿ ಕೊಂದ ಪತಿ

- Advertisement -
- Advertisement -

ಪತಿಯೊಬ್ಬ ಪತ್ನಿಯನ್ನೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯದ ಯಲಿಯೂರು ಗೇಟ್ ಬಳಿ ನಡೆದಿದೆ.

ಮನುಜ (30) ಮೃತ ದುರ್ದೈವಿ ಆಗಿದ್ದು, ರಾಮಚಂದ್ರ (38) ಹತ್ಯೆ ಮಾಡಿದ ಆರೋಪಿ ಆಗಿದ್ದಾನೆ. ಮನುಜ ಹಾಗೂ ರಾಮಚಂದ್ರ ದಂಪತಿ ನಡುವೆ ಕೌಟುಂಬಿಕ ವಿಷಯಕ್ಕೆ ಸಂಬಂಧಪಟ್ಟಂತೆ ಆಗಾಗ ಗಲಾಟೆ ನಡೆಯುತ್ತಿತ್ತು. ಶುಕ್ರವಾರವೂ ಬೆಳಗ್ಗೆ ಮಾತಿಗೆ ಮಾತು ಬೆಳೆದು ಜಗಳ ಶುರುವಾಗಿದೆ. ಜಗಳ ಅತಿರೇಕಕ್ಕೆ ತಿರುಗಿದ್ದು, ರಾಮಚಂದ್ರ ಸಿಟ್ಟಿಗೆದ್ದವನೇ ಹಲ್ಲೆ ನಡೆಸಿದ್ದಾನೆ. ಚಾಕುವಿನಿಂದ ಪತ್ನಿಯ ಕತ್ತು ಸೀಳಿ ಹತ್ಯೆ ಮಾಡಿದ್ದಾನೆ.

ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಆಗಮಿಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿದ್ದು, ಪತ್ನಿ ಕೊಲೆಗೈದ ಆರೋಪಿ ರಾಮಚಂದ್ರನನ್ನು ಬಂಧಿಸಿದ್ದಾರೆ.

- Advertisement -

Related news

error: Content is protected !!