Saturday, September 19, 2026
spot_imgspot_img
spot_imgspot_img

ವೈವಾಹಿಕ ಕಲಹದ ನಡುವೆ ಮಕ್ಕಳನ್ನು ಬಾವಿಗೆ ಎಸೆದ ಆರೋಪ; ಓರ್ವ ಮಗು ಮೃತ್ಯು

- Advertisement -
- Advertisement -

ಉಪ್ಪಿನಂಗಡಿ: ವೈವಾಹಿಕ ಕಲಹದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ತನ್ನ ಸುಮಾರು ಮೂರುವರೆ ವರ್ಷದ ಮಗು ಹಾಗೂ ಮೈದುನನ ಸುಮಾರು ಮೂರು ವರ್ಷದ ಮಗುವನ್ನು ಬಾವಿಗೆ ಎಸೆದಿರುವ ಘಟನೆ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಪೆರ್ನೆಯಲ್ಲಿ ಸೆ.19ರಂದು ನಡೆದಿದೆ.

ಪೆರ್ನೆ ನಿವಾಸಿಗಳಾದ ಸಿನಾನ್ (32) ಹಾಗೂ ನೂರುನ್ನಿಸಾ (28) ದಂಪತಿ ನಡುವೆ ಮಧ್ಯಾಹ್ನದ ವೇಳೆ ಫೋನ್ ಕರೆಯಲ್ಲಿ ವೈವಾಹಿಕ ಕಲಹ ನಡೆದಿದೆ ಎನ್ನಲಾಗಿದೆ. ಈ ವೇಳೆ ಕೋಪಗೊಂಡ ನೂರುನ್ನಿಸಾ, ಮನೆಯಲ್ಲಿದ್ದ ತನ್ನ ಸುಮಾರು ಮೂರುವರೆ ವರ್ಷದ ಮಗು ಹಾಗೂ ಗಂಡನ ತಂಗಿಯ ಸುಮಾರು ಮೂರು ವರ್ಷದ ಮಗುವನ್ನು ಮನೆಯ ಸಮೀಪದ ಬಾವಿಗೆ ಎಸೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಘಟನೆ ಗಮನಿಸಿದ ಸ್ಥಳೀಯರು ತಕ್ಷಣ ಸ್ಥಳಕ್ಕೆ ಧಾವಿಸಿ ಎರಡೂ ಮಕ್ಕಳನ್ನು ಬಾವಿಯಿಂದ ಮೇಲಕ್ಕೆತ್ತಿದ್ದಾರೆ.

ಆದರೆ ಈ ಪೈಕಿ ನೂರುನ್ನಿಸಾ ಅವರ ಗಂಡನ ತಂಗಿಯ ಮಗು ಮೃತಪಟ್ಟಿದ್ದು, ನೂರುನ್ನಿಸಾ ಅವರ ಮಗುವನ್ನು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಕುರಿತು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ. 121/2026ರಂತೆ ಪ್ರಕರಣ ದಾಖಲಾಗಿದ್ದು, ನೂರುನ್ನಿಸಾ ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!