Saturday, June 28, 2025
spot_imgspot_img
spot_imgspot_img

ಕನ್ನಡ ಕಿರುತೆರೆಯ ಖ್ಯಾತ ನಿರೂಪಕಿ ಅಪರ್ಣಾ ಇನ್ನಿಲ್ಲ

- Advertisement -
- Advertisement -

ಕನ್ನಡ ಕಿರುತೆರೆಯ ಖ್ಯಾತ ನಿರೂಪಕಿ ಅಪರ್ಣಾ ವಸ್ತಾರೆ ಅವರು ನಿಧನರಾಗಿದ್ದಾರೆ. ಕಳೆದ ಹಲವು ತಿಂಗಳುಗಳಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅಪರ್ಣಾ ಅವರು ಚಿಕಿತ್ಸೆ ಫಲಕಾರಿಯಾಗದೆ ಗುರುವಾರ (ಜುಲೈ 11) ರಾತ್ರಿ ಬೆಂಗಳೂರಿನ ಬನಶಂಕರಿಯಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಇವರ ಅಗಲಿಕೆಗೆ ಕನ್ನಡ ಸಿನಿಮಾ ರಂಗದ ನಟರು ಸೇರಿ ಹಲವರು ಕಂಬನಿ ಮಿಡಿದಿದ್ದಾರೆ.

ನಿರೂಪಕಿಯಾಗಿ ಮಾತ್ರವಲ್ಲದೇ ನಟಿಯಾಗಿ ಕೂಡ ಅವರು ಗುರುತಿಸಿಕೊಂಡಿದ್ದಾರೆ. ಸಿನಿಮಾ ಮತ್ತು ಸೀರಿಯಲ್​ಗಳಲ್ಲಿ ನಟಿಸಿ ಖ್ಯಾತಿ ಪಡೆದಿದ್ದರು. ಕಿರಿತೆರೆಯ ಅನೇಕ ಕಾರ್ಯಕ್ರಮಗಳನ್ನು ಅಪರ್ಣಾ ನಡೆಸಿಕೊಟ್ಟಿದ್ದರು. ನಮ್ಮ ಮೆಟ್ರೋ ಅನೌನ್ಸ್​ಮೆಂಟ್​ ಸೇರಿದಂತೆ ಅನೇಕ ಪ್ರಕಟಣೆಗಳಿಗೆ ಅವರು ಧ್ವನಿ ನೀಡಿದ್ದರು.

ಚಂದನ ವಾಹಿನಿಯಲ್ಲಿ ಮೂಡಿಬಂದ ಹಲವು ಕಾರ್ಯಕ್ರಮಗಳನ್ನು ಅಪರ್ಣಾ ಅವರು ನಿರೂಪಿಸಿದರು. ನಂತರ ಭಾರತ ಸರ್ಕಾರದ ‘ವಿವಿಧ ಭಾರತಿ’ ರೇಡಿಯೋ ಜಾಕಿಯಾಗಿ ಕೂಡ ಕಾರ್ಯ ನಿರ್ವಹಿಸಿದ್ದರು. 1998ರಲ್ಲಿ ನಡೆದ ದೀಪಾವಳಿ ಕಾರ್ಯಕ್ರವೊಂದನ್ನು ಸತತ ಎಂಟು ಗಂಟೆಗಳ ನಿರೂಪಣೆ ಮಾಡಿ ದಾಖಲೆ ಬರೆದಿದ್ದರು.

ಕಿರುತೆರೆಯಲ್ಲಿ ‘ಮೂಡಲಮನೆ’, ‘ಮುಕ್ತ’ ಮುಂತಾದ ಧಾರಾವಾಹಿಗಳಲ್ಲಿ ಅಪರ್ಣಾ ನಟಿಸಿದ್ದರು. 2013ರಲ್ಲಿ ಬಿಗ್ ಬಾಸ್ ಕನ್ನಡದ ಮೊದಲ ಸೀಸನ್​ನಲ್ಲಿ ಅವರು ಭಾಗವಹಿಸಿದ್ದರು. 2015ರಲ್ಲಿ ಸೃಜನ್ ಲೋಕೇಶ್ ನೇತೃತ್ವದಲ್ಲಿ ಆರಂಭವಾದ ‘ಮಜಾ ಟಾಕೀಸ್’ ಕಾರ್ಯಕ್ರಮದಲ್ಲಿ ವರಲಕ್ಷ್ಮಿ ಎಂಬ ಪಾತ್ರವನ್ನು ಅಪರ್ಣಾ ಮಾಡಿದ್ದರು.

- Advertisement -

Related news

error: Content is protected !!