Sunday, June 29, 2025
spot_imgspot_img
spot_imgspot_img

ಖ್ಯಾತ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್‌ ಹೃದಯಾಘಾತದಿಂದ ನಿಧನ

- Advertisement -
- Advertisement -

ಪುತ್ತೂರು: ಖ್ಯಾತ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ಹೃದಯಾಘಾತಕ್ಕೀಡಾಗಿ ಜುಲೈ 5ರಂದು ನಿಧನರಾಗಿದ್ದಾರೆ. 34 ನೆಕ್ಕಿಲಾಡಿ ಗ್ರಾಮದ ಶಾಂತಿನಗರ ಸಮೀಪದ ಬೇರಿಕೆ ನಿವಾಸಿ ಶ್ರೀಧರ ರಾವ್ ಅವರಿಗೆ ಬೆಳಿಗ್ಗೆ ತೀವು ಎದೆ ನೋವು ಕಾಣಿಸಿಕೊಂಡಿದ್ದು ಪುತ್ತೂರಿನ ಮಹಾವೀರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.

ಇವರು ಧರ್ಮಸ್ಥಳ ಮೇಳವೊಂದರಲ್ಲಿಯೇ ನಿರಂತರ 50 ವರ್ಷಗಳ ಸೇವೆ ಮಾಡಿದ್ದಾರೆ.ಕೂಡ್ಲು, ಮೂಲ್ಕಿ, ಇರಾ, ಕರ್ನಾಟಕ, ಧರ್ಮಸ್ಥಳ ಮೇಳಗಳಲ್ಲಿ ಆರು ದಶಕಕ್ಕೂ ಮಿಕ್ಕಿ ಕಲಾ ಸೇವೆ ಮಾಡಿದ್ದ ಶ್ರೀಧರ ರಾವ್‌ ರವರು ಸ್ತ್ರೀ ವೇಷಧಾರಿಯಾಗಿ ಪ್ರಸಿದ್ಧರಾಗಿದ್ದರು. ಪುರುಷ ವೇಷದಲ್ಲಿಯೂ ಸೈ ಅನ್ನಿಸಿಕೊಂಡಿದ್ದರು.

ಮೃತರು ಶಾಂತಿನಗರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸಿ ನಿವೃತ್ತರಾಗಿರುವ ಪತ್ನಿ ಸುಲೋಚನಾ, ಪುತ್ರರಾದ ಬೆಂಗಳೂರಿನಲ್ಲಿ ಪತ್ರಕರ್ತರಾಗಿರುವ ಗಣೇಶ್ ಪ್ರಸಾದ್, ಕೃಷ್ಣಪ್ರಸಾದ್ ಮತ್ತು ದೇವಿಪ್ರಸಾದ್, ಸೊಸೆಯಂದಿರು ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.

- Advertisement -

Related news

error: Content is protected !!