Sunday, June 14, 2026
spot_imgspot_img
spot_imgspot_img

ಫರಂಗಿಪೇಟೆ: ಬೈಕ್ ಗೆ ಬಸ್ ಡಿಕ್ಕಿ; ಸವಾರ ಮೃತ್ಯು..!

- Advertisement -
- Advertisement -

ಫರಂಗಿಪೇಟೆ: ಬೈಕ್ ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಅರ್ಕುಳ ದ್ವಾರದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಕುಕ್ಕಾಜೆ ನಿವಾಸಿ ಹಂಝ ಯಾನೆ ರಮ್ಲಾನ್ ಎಂದು ಗುರುತಿಸಲಾಗಿದೆ.

ಮಂಗಳೂರು ಕಡೆಗೆ ಬರುತ್ತಿದ್ದ ವೇಳೆ ಹಿಂದಿನಿಂದ ಬಂದ ಬಸ್ ಬೈಕ್ ಗೆ ಢಿಕ್ಕಿ ಹೊಡೆದಿದ್ದು,ಇದರಿಂದ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡ ರಮ್ಲಾನ್ ಮೃತಪಟ್ಟಿದ್ದಾರೆ. ಬೈಕ್ ನ ಹಿಂಬದಿಯಲ್ಲಿದ್ದ ರಮ್ಲಾನ್ ಅವರ ಪತ್ನಿ ಬಜಾಲ್ ಮೂಲದ ರೈಹಾನ ಮತ್ತು ಮಗು ಅದೃಷ್ಟಶಾತ್ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

Related news

error: Content is protected !!