Thursday, July 23, 2026
spot_imgspot_img
spot_imgspot_img

ರಾಯಚೂರಿನಲ್ಲಿ ಸಿಡಿಲು ಬಡಿದು ರೈತ ಮಹಿಳೆ ಸಾವು – ತೆಂಗಿನ ಮರ ಸುಟ್ಟು ಭಸ್ಮ

- Advertisement -
- Advertisement -

ರಾಯಚೂರು: ಜಿಲ್ಲೆಯ ಹಲವೆಡೆ ಗುಡುಗು ಸಿಡಿಲು ಮಿಂಚು ಸಹಿತ ಜೋರು ಮಳೆಯಾಗಿದ್ದು ಲಿಂಗಸೂಗೂರು ತಾಲೂಕಿನ ಯರಜಂತಿ ಬಳಿ ಬಸವನ ಬಗಡಿ ದೊಡ್ಡಿಯಲ್ಲಿ ಸಿಡಿಲು ಬಡಿದು ರೈತ ಮಹಿಳೆ ಸಾವನ್ನಪ್ಪಿದ್ದಾರೆ.

40 ವರ್ಷದ ದುರುಗಮ್ಮ ಸಿಡಿಲಿಗೆ ಬಲಿಯಾದ ರೈತ ಮಹಿಳೆ. ಮಳೆ ಹಿನ್ನೆಲೆ ಬಣವೆಗೆ ತಾಡಪಾಲು ಹೊದಿಸುವ ವೇಳೆ ಸಿಡಿಲು ಬಡಿದಿದೆ. ಸಿಡಿಲಿನ ಹೊಡೆತಕ್ಕೆ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಲಿಂಗಸುಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮಾನ್ವಿ ತಾಲೂಕಿನ ಹಿರೇದಿನ್ನಿ ಗ್ರಾಮದಲ್ಲಿ ಸಿಡಿಲು ಬಡಿದು ತೆಂಗಿನ ಮರ ಹೊತ್ತಿ ಉರಿದಿದೆ. ಸಿಡಿಲು ಬಡಿದು ಮರ ಹೊತ್ತಿ ಉರಿಯುವುದು ಕಂಡು ಜನ ಆತಂಕಕ್ಕೊಳಗಾಗಿದ್ದರು. ರಾಯಚೂರು ನಗರದಲ್ಲೂ ಸುಮಾರು ಹೊತ್ತು ಮಳೆ ಸುರಿದಿದೆ ಎಂದು ವರದಿ ಮೂಲಕ ತಿಳಿದು ಬಂದಿದೆ.

- Advertisement -

Related news

error: Content is protected !!