Thursday, June 18, 2026
spot_imgspot_img
spot_imgspot_img

ಬೈಕ್- ಆ್ಯಂಬುಲೆನ್ಸ್ ನಡುವೆ ಭೀಕರ ಅಪಘಾತ; ಮೂವರು ಬೈಕ್‌ ಸವಾರರು ಸಾವು..!

- Advertisement -
- Advertisement -

ಶಿವಮೊಗ್ಗ: ಬೈಕ್ ಮತ್ತು ಆ್ಯಂಬುಲೆನ್ಸ್ ಮಧ್ಯೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಬೈಕ್‌ ಸವಾರರು ಮೃತಪಟ್ಟ ಘಟನೆ ಜಿಲ್ಲೆಯ ಶಿಕಾರಿಪುರ ತಾಲೂಕಿನ ತರಲಘಟ್ಟ ಬಳಿ ನಡೆದಿದೆ.

ಅಪಘಾತದಲ್ಲಿ ಮೃತಪಟ್ಟವರನ್ನು ಹೊಸ ಜೋಗದ ನಿವಾಸಿಗಳಾದ ಪ್ರಸನ್ನ (25), ಕಾರ್ತಿಕ್ (27) ಮತ್ತು ಅಜಯ್ (25) ಎಂದು ಗುರುತಿಸಲಾಗಿದೆ.

ಶಿವಮೊಗ್ಗದಿಂದ ಹಾವೇರಿ ಕಡೆಗೆ ತೆರಳುತ್ತಿದ್ದ 108 ಆ್ಯಂಬುಲೆನ್ಸ್ ಹಾಗೂ ಶಿಕಾರಿಪುರದ ಕಡೆಯಿಂದ ಹೊಸ ಜೋಗದ ಕಡೆ ಬರುತ್ತಿದ್ದ ಬೈಕ್ ಮಧ್ಯೆ ಈ ಅಪಘಾತ ಸಂಭವಿಸಿದೆ. ಪರಿಣಾಮ ಮೂವರು ಬೈಕ್‌ ಸವಾರರು ಮೃತಪಟ್ಟಿದ್ದಾರೆ. ಈ ಬಗ್ಗೆ ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!