- Advertisement -
- Advertisement -



ಕಾರು ಮತ್ತು ಕೆಎಸ್‌ಆರ್‌ಟಿಸಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕೊಡಗಿನ ಸೋಮವಾರಪೇಟೆ ಬಳಿಯ ಹಿರಿಕರ ಗ್ರಾಮದ ದಂಪತಿ ಮೃತಪಟ್ಟ ಘಟನೆ ಬಿಳಿಕೆರೆ ಬಳಿಯ ರಂಗನಕೊಪ್ಪಲು ಹೆದ್ದಾರಿಯಲ್ಲಿ ನಡೆದಿದೆ.
ಘಟನೆಯಿಂದ ನಿವೃತ್ತ ಪ್ರಾಂಶುಪಾಲ ಎಚ್.ಬಿ.ಬೆಳ್ಳಿಯಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಳ್ಳಿಯಪ್ಪ ಅವರ ಪತ್ನಿ ವೀಣಾ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಸಂದರ್ಭ ಮಾರ್ಗದ ಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ದಂಪತಿ ಶನಿವಾರ ಮಧ್ಯಾಹ್ನ ಕಾರಿನಲ್ಲಿ ಮೈಸೂರಿಗೆ ತೆರಳುತ್ತಿದ್ದರು. ಈ ಸಂದರ್ಭ ಅಪಘಾತ ಸಂಭವಿಸಿದೆ. ಭೀಕರ ಅಪಘಾತದಿಂದ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -








