Friday, March 29, 2024
spot_imgspot_img
spot_imgspot_img

ಎಫ್​ಡಿಎ ಪರೀಕ್ಷೆಗೆ ಮುಹೂರ್ತ ಫಿಕ್ಸ್- ಅಧಿಕೃತ ಆದೇಶ ಹೊರಡಿಸಿದ ಕೆಪಿಎಸ್​ಸಿ!

- Advertisement -G L Acharya panikkar
- Advertisement -

ಬೆಂಗಳೂರು: ಕೆಪಿಎಸ್​ಸಿಯ ಎಫ್​ಡಿಎ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಲೀಕ್ ಆಗಿದ್ದ ಹಿನ್ನೆಲೆ ಮುಂದೂಡಲಾಗಿದ್ದ ಪರೀಕ್ಷೆಯನ್ನು ಫೆ.28ಕ್ಕೆ ನಡೆಸಲು ಕೆಪಿಎಸ್​ಸಿ ನಿರ್ಧರಿಸಿದೆ. ಈ ಕುರಿತು ಕೆಪಿಎಸ್​ಸಿ ಕಾರ್ಯದರ್ಶಿ ಜಿ. ಸತ್ಯವತಿಯವರು ಅಧಿಕೃತ ಆದೇಶ ಹೊರಡಿಸಿದ್ದಾರೆ.

ಜ. 24 ರಂದು ನಡೆಯಬೇಕಿದ್ದ ಎಫ್​ಡಿಎ ಪರೀಕ್ಷೆಯನ್ನು ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ ಮುಂದೂಡಲಾಗಿತ್ತು. ಪ್ರಶ್ನೆ ಪತ್ರಿಕೆ ಸೊರಿಕೆ ಬಗ್ಗೆ ಮಾಹಿತಿ ಪಡೆದಿದ್ದ ಸಿಸಿಬಿ ಪೊಲೀಸರು ಮಾಹಿತಿಯನ್ನು ಕೆಪಿಎಸ್​ಸಿಗೆ ತಿಳಿಸಿದ್ದರು.

ಈ ಬಗ್ಗೆ ತನಿಖೆಗಿಳಿದಿದ್ದ ಪೊಲೀಸರು ಹಲವರನ್ನು ಬಂಧಿಸಿದ್ದಾರೆ. 1,114 ಹುದ್ದೆಗಳಿಗೆ ಈ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಗೆ 3.74 ಲಕ್ಷ ಅಭ್ಯರ್ಥಿಗಳು ನೊಂದಾಯಿಸಿಕೊಂಡಿದ್ದಾರೆ ಎನ್ನಲಾಗಿದೆ.

- Advertisement -

Related news

error: Content is protected !!