Sunday, May 19, 2024
spot_imgspot_img
spot_imgspot_img

ನಿಫಾ ಸೋಂಕು ಹರಡುವ ಭೀತಿ : ಸೆ.24ರ ವರೆಗೆ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

- Advertisement -G L Acharya panikkar
- Advertisement -

ಕೇರಳದಲ್ಲಿ ನಿಫಾ ವೈರಸ್ ಹೆಚ್ಚಳದಿಂದ ಸೋಂಕಿತರ ಸಂಖ್ಯೆ ಆರಕ್ಕೇರಿದೆ. ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಕೇರಳ ರಾಜ್ಯದಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಸದ್ಯ ಈ ರಜೆಯನ್ನು ಸೆ.24ರ ವರೆಗೆ ವಿಸ್ತರಿಸಲಾಗಿದೆ.

ಎಲ್ಲಾ ಶಾಲೆಗಳಿಗೆ ಸೆ.14 ಮತ್ತು 15 ರಂದು ರಜೆ ನೀಡುವಂತೆ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದರು. ಅಲ್ಲದೆ, ಈ ಆದೇಶ ಅಂಗನವಾಡಿಗಳು, ಮದರಾಸಗಳು, ಬೋಧನಾ ಕೇಂದ್ರಗಳು ಮತ್ತು ವೃತ್ತಿಪರ ಕಾಲೇಜುಗಳಿಗೂ ಅನ್ವಯಿಸುತ್ತದೆ ಎಂದು ತಿಳಿಸಲಾಗಿತ್ತು. ಬಳಿಕ ಒಂದು ದಿನ ರಜೆಯನ್ನು ವಿಸ್ತರಿಸಲಾಗಿತ್ತು. ಇದೀಗ ಮುಂಜಾಗ್ರತಾ ಕ್ರಮವಾಗಿ ಸೆ.24 ರವರೆಗೆ ರಜೆ ವಿಸ್ತರಿಸಲಾಗಿದೆ.

- Advertisement -

Related news

error: Content is protected !!