Friday, May 3, 2024
spot_imgspot_img
spot_imgspot_img

ಪರೀಕ್ಷೆಗೆ ಹೆದರಿ ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆಗೆ ಶರಣು

- Advertisement -G L Acharya panikkar
- Advertisement -

ಯುಪಿಎಸ್‌ಸಿ ಪರೀಕ್ಷೆಗೆ ಹೆದರಿ ಡೆತ್ ನೋಟ್ ಬರೆದಿಟ್ಟು ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಮಜರಾ ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.

ಆತ್ಮಹತ್ಯೆಗೆ ಶರಣಾಗಿರುವ ಯುವಕ ಜಗದೀಶ್ (28) ಎಂದು ತಿಳಿದು ಬಂದಿದೆ.

ಮಾರ್ಚ್ 12 ರಂದು ಮನೆಯವರು ಊರಿಗೆ ಹೋಗಿದರು. ನಿನ್ನೆ ರಾತ್ರಿ ಮರಳಿ ಮನೆಗೆ ಬಂದಾಗ ಜಗದೀಶ್ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಎಂಎ, ಎಂಎಡ್ ವ್ಯಾಸಾಂಗ ಮಾಡಿದ್ದ ಜಗದೀಶ್, ಡೆತ್ ನೋಟ್ ನಲ್ಲಿ ಪರೀಕ್ಷೆ ಎದುರಿಸಲು ಸಾಧ್ಯವಾಗುತ್ತಿಲ್ಲ ಹಾಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಬರೆದಿದ್ದಾನೆ. ಈ ಕುರಿತು ಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!