Friday, April 19, 2024
spot_imgspot_img
spot_imgspot_img

ವಿಟ್ಲ : (ಫೆ.25) ವಿಟ್ಲ ಕುಲಾಲ ಸಂಘದ ನೂತನ ಸಭಾಭವನ “ಕುಲಾಲ ರಜತ ಭವನ” ಉದ್ಘಾಟನೆ, ಬೆಳ್ಳಿಹಬ್ಬ ಸಂಭ್ರಮ, ವಾರ್ಷಿಕ ಶ್ರೀ ಸತ್ಯನಾರಾಯಣ ಪೂಜೆ

- Advertisement -G L Acharya panikkar
- Advertisement -

ವಿಟ್ಲ: ಕುಲಾಲ ಸಂಘ ವಿಟ್ಲ ಇದರ ಆಶ್ರಯದಲ್ಲಿ ವಿಟ್ಲ ಸಮುದಾಯ ಆರೋಗ್ಯ ಕೇಂದ್ರದ ಬಳಿ ನಿರ್ಮಿಸಲಾದ ನೂತನ ಸಭಾಭವನ ‘ಕುಲಾಲ ರಜತ ಭವನ’ ಉದ್ಘಾಟನೆ, ಬೆಳ್ಳಿಹಬ್ಬ ಸಂಭ್ರಮ ಮತ್ತು ವಾರ್ಷಿಕ ಶ್ರೀ ಸತ್ಯನಾರಾಯಣ ಪೂಜೆಯು ಸಂಘದ ಮಹಿಳಾ ಘಟಕದ ಸಹಭಾಗಿತ್ವದಲ್ಲಿ ಫೆ.25ರಂದು ನಡೆಯಲಿದೆ.

ಬೆಳಗ್ಗೆ ಗಂಟೆ 7.30ಕ್ಕೆ ಗಣಹೋಮ, ಬಳಿಕ ಸತ್ಯನಾರಾಯಣ ಪೂಜೆ ಆರಂಭಗೊಳ್ಳಲಿದೆ. ಬಳಿಕ ಮಾಮೇಶ್ವರ ಶ್ರೀ ಉಮಾಮಹೇಶ್ವರ ಭಜನಾ ಮಂಡಳಿಯವರಿಂದ ಭಜನೆ ನಡೆಯಲಿದೆ. ಬೆಳಗ್ಗೆ ಗಂಟೆ 10.30ಕ್ಕೆ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಅಶೋಕ್ ಕುಮಾರ್ ರೈ ರವರು ನೂತನ ಸಭಾ ಭವನವನ್ನು ಉದ್ಘಾಟಿಸಲಿದ್ದಾರೆ. ಶ್ರೀಧಾಮ ಮಾಣಿಲ ಶ್ರೀ ಮಹಾಲಕ್ಷ್ಮೀ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಆಶೀರ್ವಚನ ನೀಡಲಿದ್ದಾರೆ. ನಡುಬೊಟ್ಟು ಶ್ರೀ ಉದ್ಬವ ರೌದ್ರನಾಥೇಶ್ವರ ಕ್ಷೇತ್ರದ ಧರ್ಮದರ್ಶಿ ರವಿ ಎನ್ ನಡುಬೊಟ್ಟು ದೀಪ ಪ್ರಜ್ವಲನೆ ಮಾಡಲಿದ್ದಾರೆ. ವಿಟ್ಲ ಕುಲಾಲ ಸಂಘದ ಅಧ್ಯಕ್ಷರಾದ ಬಿ.ಕೆ.ಬಾಬು ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ವೇದಿಕೆಯಲ್ಲಿ ವಿವಿಧ ಕ್ಷೇತ್ರದ ಗಣ್ಯರು ಉಪಸ್ಥಿತರಿರುವರು.ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರದ ಸಾಧಕರನ್ನು ಗೌರವಿಸಲಾಗುವುದು.

ರಾತ್ರಿ ಗಂಟೆ 7 ಕ್ಕೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ವಿವಿಧ ಕ್ಷೇತ್ರದ ಗಣ್ಯರು ಉಪಸ್ಥಿತರಿರಲಿದ್ದಾರೆ. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರದ ಗಣ್ಯರನ್ನು ಗೌರವಿಸಲಾಗುವುದು ಎಂದರು. ಸಾಯಂಕಾಲ ಆರು ಗಂಟೆಯಿಂದ ವಿಠಲ್ ಜಿಸೀಸ್ ಆಂಗ್ಲ ಮಾಧ್ಯಮ ಶಾಲಾ ‘ಜೇಸಿ ಫೆವಿಲಿಯನ್ ನಲ್ಲಿ ಸ್ವಜಾತಿ ಬಾಂಧವರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಬಳಿಕ ಪವನ ಕಲಾವಿದರು ಕುಡ್ಲ ಇವರಿಂದ ತೂಯಿಲೆಕ ಅತ್ತು ತುಳು ಹಾಸ್ಯ ಸಾಮಾಜಿಕ ನಾಟಕ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!