Monday, April 29, 2024
spot_imgspot_img
spot_imgspot_img

ಡಸ್ಟ್‌ಬಿನ್‌ನಲ್ಲಿ ಹೆಣ್ಣು ಭ್ರೂಣ ಪತ್ತೆ- ನಾಲ್ವರು ನೌಕರರ ಬಂಧನ

- Advertisement -G L Acharya panikkar
- Advertisement -

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಖಾಸಗಿ ಆಸ್ಪತ್ರೆಯೊಂದರ ಆವರಣದ ಕಸದ ತೊಟ್ಟಿಯಲ್ಲಿ ಹೆಣ್ಣು ಭ್ರೂಣ ಪತ್ತೆಯಾದ ಹಿನ್ನೆಲೆಯಲ್ಲಿ ಆಸ್ಪತ್ರೆ ಸೀಲ್ ಮಾಡಲಾಗಿದ್ದು, ನಾಲ್ವರು ನೌಕರರನ್ನು ವಶಕ್ಕೆ ಪಡೆಯಲಾಗಿದೆ .

ಆರೋಗ್ಯ ಅಧಿಕಾರಿಗಳ ತಂಡ ತಮ್ಮ ದಿನನಿತ್ಯದ ತಪಾಸಣೆಯ ಭಾಗವಾಗಿ ಆಸ್ಪತ್ರೆಗೆ ಭೇಟಿ ನೀಡಿದ್ದಾಗ ಹೆಣ್ಣು ಭ್ರೂಣ ಕಂಡು ಅವರು ಆಘಾತಕ್ಕೊಳಗಾಗಿದ್ದಾರೆ. ತಪಾಸಣೆ ವೇಳೆ ಆಪರೇಷನ್ ಥಿಯೇಟರ್‌ನಲ್ಲಿ ಮಹಿಳೆಯೊಬ್ಬರು ಮಲಗಿರುವುದು ಕಂಡು ಬಂದಿದ್ದು, ಕಸದ ತೊಟ್ಟಿಯಲ್ಲಿ ಎಸೆದಿರುವ ಭ್ರೂಣ ಆಕೆಯದ್ದೇ ಎಂದು ಶಂಕಿಸಿದ್ದಾರೆ. ಆದರೆ, ವಿಚಾರಣೆ ನಡೆಯುತ್ತಿದೆ ಮತ್ತು ಬಿಸಾಡಿದ್ದ ಭ್ರೂಣ ಆಕೆಯದ್ದೋ ಅಥವಾ ಬೇರೆಯವರದೋ ಎಂದು ಇನ್ನೂ ಪರಿಶೀಲಿಸಬೇಕಾಗಿದೆ ಎಂದು ಪೊಲೀಸ್ ಅಧಿಕಾರಿ ಹೇಳಿದರು.

ಆರೋಗ್ಯಾಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದು, ಆಸ್ಪತ್ರೆಗೆ ಸೀಲ್ ಮಾಡಿದ್ದಾರೆ. ಆರೋಗ್ಯ ಅಧಿಕಾರಿಗಳ ತಂಡ ತಪಾಸಣೆ ನಡೆಸಿದಾಗ ಭ್ರೂಣ ಎಸೆದಿರುವ ಬಗ್ಗೆ ಪುರಾವೆಗಳು ಕಂಡುಬಂದಿವೆ ಮತ್ತು ಸ್ಕ್ಯಾನಿಂಗ್‌ ನಿರ್ವಹಣೆಗೆ ಸಂಬಂಧಿಸಿದಂತೆ ಸರಿಯಾದ ದಾಖಲೆಗಳು ಇಲ್ಲ. ಹೀಗಾಗಿ ಆಸ್ಪತ್ರೆಯನ್ನು ಸೀಲ್ ಮಾಡಲಾಗಿದೆ” ಎಂದು ತಿಳಿಸಿದ್ದಾರೆ.

ಸಂಬಂಧಿತ ಆರೋಗ್ಯ ಅಧಿಕಾರಿಗಳು ನೀಡಿದ ಹೇಳಿಕೆ ಮತ್ತು ದೂರಿನ ಆಧಾರದ ಮೇಲೆ, ಲೈಂಗಿಕ ಆಯ್ಕೆ ನಿಷೇಧ ಕಾಯ್ದೆ, ಸೆಕ್ಷನ್ 312 (ಗರ್ಭಪಾತಕ್ಕೆ ಕಾರಣ), 314 (ಉದ್ದೇಶಪೂರ್ವಕವಾಗಿ ಮಾಡಿದ ಕೃತ್ಯದಿಂದ ಉಂಟಾಗುವ ಸಾವು) ಐಸಿಪಿ ಸೆಕ್ಷನ್ 315 (ಮಗು ಜೀವಂತವಾಗಿ ಜನಿಸುವುದನ್ನು ತಡೆಯುವ ಅಥವಾ ಹುಟ್ಟಿದ ನಂತರ ಸಾಯುವಂತೆ ಮಾಡುವ ಉದ್ದೇಶ)ಅಡಿಯಲ್ಲಿ ಖಾಸಗಿ ಆಸ್ಪತ್ರೆಯ ಮಾಲೀಕರು ಮತ್ತು ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆಸ್ಪತ್ರೆ ಮಾಲೀಕ ತಲೆಮರೆಸಿಕೊಂಡಿದ್ದು, ಅವರ ಪತ್ತೆಗೆ ತಂಡಗಳನ್ನು ರಚಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

- Advertisement -

Related news

error: Content is protected !!