Monday, June 22, 2026
spot_imgspot_img
spot_imgspot_img

ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್ ಹೃದಯಾಘಾತದಿಂದ ಮೃತ್ಯು

- Advertisement -
- Advertisement -
vtv vitla

ಬೆಂಗಳೂರಿನ ಕೆಂಗೇರಿ ಸಂಚಾರಿ ಠಾಣೆಯ ಮಹಿಳಾ ಕಾನ್ಸ್ ಟೇಬಲ್ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಪ್ರಿಯಾಂಕಾ ಸಾವನ್ನಪ್ಪಿದ ಪೊಲೀಸ್ ಸಿಬ್ಬಂದಿ.

ನಿನ್ನೆ ರಾತ್ರಿ 11.30ರ ಸುಮಾರಿಗೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಪ್ರಿಯಾಂಕಾ ಅವರಿಗೆ 2018ರಲ್ಲಿ ಮದುವೆಯಾಗಿತ್ತು. ಆದರೆ 2021ರಲ್ಲಿ ಕೊರೋನಾ ಸಂದರ್ಭದಲ್ಲಿ ಇವರ ಪತಿ ಮೃತಪಟ್ಟಿದ್ದರು. ಆ ಸಂದರ್ಭದಲ್ಲಿ ಪ್ರಿಯಾಂಕಾ 1 ತಿಂಗಳ ಗರ್ಭಿಣಿಯಾಗಿದ್ದರು.

ಇತ್ತೀಚೆಗೆ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಪಿಸಿ ಪ್ರಿಯಾಂಕಾ, 10 ದಿನ ರಜೆ ಪಡೆದು ಅಜ್ಜಂಪುರಕ್ಕೆ ತೆರಳಿದ್ದರು. ಆದರೆ ನಿನ್ನೆ ರಾತ್ರಿ 11.30ರ ಸುಮಾರಿಗೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕೊರೋನಾ ಸಮಯದಲ್ಲಿ ತಂದೆಯನ್ನು ಕಳೆದುಕೊಂಡಿದ್ದ ಮಗು ಇದೀಗ ತಾಯಿಯನ್ನೂ ಕಳೆದುಕೊಂಡು ಅನಾಥವಾಗಿದೆ.

- Advertisement -

Related news

error: Content is protected !!