Sunday, May 5, 2024
spot_imgspot_img
spot_imgspot_img

ಅರಣ್ಯಾಧಿಕಾರಿಗಳನ್ನು ಅವಾಚ್ಯ ಪದಗಳಿಂದ ನಿಂದಿಸಿದ ಬೆಳ್ತಂಗಡಿ ಶಾಸಕ : ಪ್ರಕರಣ ದಾಖಲು

- Advertisement -G L Acharya panikkar
- Advertisement -
This image has an empty alt attribute; its file name is balavikas-866x1024.jpg

ವಲಯ ಅರಣ್ಯಾಧಿಕಾರಿಗಳನ್ನು ಅವಾಚ್ಯ ಪದಗಳಿಂದ ನಿಂದಿಸಿದ್ದು , ಅರಣ್ಯ ಇಲಾಖೆ ಅಧಿಕಾರಿಗಳು ಕರ್ತವ್ಯ ನಿರ್ವಹಿಸುತ್ತಿರುವಾಗ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂಬ ಕಾರಣಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಉಪ್ಪಿನಂಗಡಿ ವಲಯ ಅರಣ್ಯ ಅಧಿಕಾರಿ ಜಯಪ್ರಕಾಶ್ ಕೆ.ಕೆ. ನೀಡಿದ ದೂರಿನಂತೆ ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲಾಗಿದೆ. ಧರ್ಮಸ್ಥಳ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಸರ್ವೆ ನಂಬರ್ 309 ರ ನಿಡ್ಲೆ ವಿಕೃತ ಬ್ಲಾಕ್ 2ರಲ್ಲಿ ಅಮ್ಮಿನಡ್ಕ – ಕುದ್ದ ನಿವಾಸಿ ಲೋಲಾಕ್ಷ ಯಾನೆ ಅನಂತುರವರು ಅರಣ್ಯ ಇಲಾಖೆಯ ಜಾಗವನ್ನು ಒತ್ತುವರಿ ಮಾಡಿ ನೂತನ ಮನೆ ನಿರ್ಮಾಣಕ್ಕೆ ಮುಂದಾಗಿರುವ ಬಗ್ಗೆ ಮಂಗಳೂರು ಅರಣ್ಯ ಇಲಾಖೆಗೆ ದೂರು ಬಂದಿತ್ತು. ಈ ಹಿನ್ನೆಲೆ ಅ.6 ರಂದು ಅರಣ್ಯ ಇಲಾಖೆ ಸಿಬ್ಬಂದಿಗಳು ನೂತನ ಮನೆಯ ಫೌಂಡೇಶನ್ ತೆರವುಗೊಳಿಸಿದ್ದರು.
ಶಾಸಕ ಹರೀಶ್ ಪೂಂಜ ಅ.7 ರಂದು ಸ್ಥಳಕ್ಕೆ ಭೇಟಿ ನೀಡಿ ಅರಣ್ಯಧಿಕಾರಿಗಳನ್ನು ತೆಗೆದುಕೊಂಡಿದ್ದರು. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅನೇಕ ವಿಡಿಯೋಗಳು ಹರಿದಾಡಿದ್ದವು.

ಮನೆ ಮಂದಿಗೆ ಯಾವುದೇ ನೋಟಿಸ್, ಮಾಹಿತಿ ನೀಡದೆ ತೆರವುಗೊಳಿಸಿದ್ದೀರಿ ಎಂದು ಶಾಸಕರು ತಮ್ಮ ಸಮ್ಮುಖದಲ್ಲಿ ಊರಿನವರೊಡಗೂಡಿ ತಾತ್ಕಾಲಿಕ ಶೆಡ್ ನಿರ್ಮಿಸಿದರು. ಇದಕ್ಕೆ ಅಡ್ಡಿಪಡಿಸುವ ಮೊದಲು ಕಂದಾಯ ಇಲಾಖೆ ಹಾಗೂ ಅರಣ್ಯ ಜಂಟಿ ಸರ್ವೇ ನಡೆಸಿ ಬಳಿಕ ತೆರವುಗೊಳಿಸಿ ಎಂದು ಸೂಚಿಸಿದ್ದರು. ಅರಣ್ಯ ಇಲಾಖೆ ಜಾಗವನ್ನು ಒತ್ತುವರಿ ನಡೆಸಿದವರು ಹಾಗೂ ಇದಕ್ಕೆ ಸಹಕರಿಸಿದ 11 ಜನರ ವಿರುದ್ಧ ಅ.7ರಂದು ಧರ್ಮಸ್ಥಳ ಠಾಣೆಯಲ್ಲಿ ಉಪ್ಪಿನಂಗಡಿ ವಲಯ ಅರಣ್ಯ ಅಧಿಕಾರಿ ದೂರು ದಾಖಲಿಸಿದ್ದರು.

ಅ.9 ರಂದು ಮತ್ತೆ ಮೇಲಾಧಿಕಾರಿಗಳ ಆದೇಶದಂತೆ ಎಸಿಎಫ್‌ ಸುಬ್ಬಯ್ಯ ನಾಯ್ಕ, ಉಪ್ಪಿನಂಗಡಿ ವಲಯ ಅರಣ್ಯ ಅಧಿಕಾರಿ ಜಯಪ್ರಕಾಶ್ ಕೆ.ಕೆ.ನೇತೃತ್ವದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಲೋಲಾಕ್ಷ ಅವರ ಮನೆಯ ಶೆಡ್ ತೆರವಿಗೆ ಮುಂದಾಗಿದ್ದರು. ಜಿಲ್ಲೆಯ ಹಲವು ಶಾಸಕರು ಈ ಪ್ರಕರಣದಲ್ಲಿ ಲೋಲಾಕ್ಷ ಅವರ ಪರ ನಿಂತು ಶೆಡ್ ತೆರವುಗೊಳಿಸದಂತೆ ನೋಡಿಕೊಂಡರು.
ಈ ಸಂದರ್ಭ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಉಪ್ಪಿನಂಗಡಿ ವಲಯ ಅರಣ್ಯ ಅಧಿಕಾರಿ ಜಯಪ್ರಕಾಶ್ ಕೆ.ಕೆ.ರವರಿಗೆ ಅವಾಚ್ಯ ಪದ ಬಳಸಿ ನಿಂದಿಸಿರುವ ಬಗ್ಗೆ ಅಕ್ಟೋಬರ್ 13ರಂದು ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

- Advertisement -

Related news

error: Content is protected !!