Saturday, May 4, 2024
spot_imgspot_img
spot_imgspot_img

ದುಬೈನಲ್ಲಿ ಕಾಣಿಸಿಕೊಂಡ ಸ್ಟಾರ್‌ ಜೋಡಿ; ನಟಿ ಹರಿಪ್ರಿಯಾ, ವಸಿಷ್ಠ ಸಿಂಹ ಸದ್ಯದಲ್ಲೇ ಸಪ್ತಪದಿ ತುಳಿಯಲಿದ್ದಾರ…?

- Advertisement -G L Acharya panikkar
- Advertisement -

ಸ್ಯಾಂಡಲ್ ವುಡ್‌ನ ಮತ್ತೊಂದು ಸ್ಟಾರ್ ಜೋಡಿಯು ಹೊಸ ಜೀವನಕ್ಕೆ ಕಾಲಿಡಲು ಮುಂದಾಗಿರುವ ವಿಷಯ ಸಾಕಷ್ಟು ಸದ್ದು ಮಾಡುತ್ತಿದೆ. ನಟಿ ಹರಿಪ್ರಿಯಾ ಮತ್ತು ನಟ ವಸಿಷ್ಠ ಸಿಂಹ ಸದ್ಯದಲ್ಲೇ ಸಪ್ತಪದಿ ತುಳಿಯಲಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಈವರೆಗೂ ಹರಿಪ್ರಿಯಾ ಆಗಲಿ ಅಥವಾ ವಸಿಷ್ಠ ಸಿಂಹ ಆಗಲಿ ಮದುವೆಯ ಬಗ್ಗೆ ಯಾವುದೇ ಖಚಿತ ಮಾಹಿತಿ ತಿಳಿಸಿಲ್ಲ. ಆದರೆ, ಈ ಸುದ್ದಿಗೆ ಪುಷ್ಠಿ ನೀಡುವಂತೆ ಸಾಕಷ್ಟು ಪುರಾವೆಗಳು ಸಿಗುತ್ತಿವೆ.

ಮೊನ್ನೆಯಷ್ಟೇ ಹರಿಪ್ರಿಯಾ ಮೂಗು ಚುಚ್ಚಿಸಿಕೊಂಡಿದ್ದರು. ಆ ಸಂದರ್ಭದಲ್ಲಿ ಸ್ವತಃ ವಸಿಷ್ಠ ಸಿಂಹ ಅವರೇ ಉಪಸ್ಥಿತರಿದ್ದು, ಮೂಗು ಚುಚ್ಚಿಸಿದ್ದರು. ಆನಂತರ ಅನೇಕ ವಿಡಿಯೋಗಳಲ್ಲಿ ಇಬ್ಬರೂ ಒಟ್ಟಾಗಿ ಡಾನ್ಸ್ ಮಾಡಿದ್ದರು. ವಿಡಿಯೋಗಳಿಗೆ ‘ಪಾರ್ಟನರ್’ ಎಂದೆಲ್ಲ ಬರೆದುಕೊಂಡಿದ್ದರು. ಇತ್ತೀಚೆಗೆ ಮತ್ತೊಂದು ಸುದ್ದಿ ಕೂಡ ಹೊರ ಬಂದಿತ್ತು. ಇಬ್ಬರೂ ಈಗಾಗಲೇ ದುಬೈ ಪ್ರವಾಸ ಮಾಡಿ ಶಾಪಿಂಗ್ ಕೂಡ ಮಾಡಿದ್ದಾರೆ ಎಂದು ಹೇಳಲಾಗಿತ್ತು. ಅದಕ್ಕೆ ಸಂಬಂಧಿಸಿದಂತೆ ಫೋಟೋ ಕೂಡ ಹೊರ ಬಂದಿದೆ.

ಯಾವುದೇ ಸುಳಿವು ಕೊಡದೇ ಏಕಾಏಕಿಯಾಗಿ ಇಂಥದ್ದೊಂದು ಸುದ್ದಿ ಕೊಟ್ಟ ತಾರೆಯರು, ಭೇಟಿಯಾಗಿದ್ದು ಎಲ್ಲಿ? ಪ್ರೇಮ ಶುರುವಾಗಿದ್ದು ಯಾವಾಗ? ಮೊದಲು ಪ್ರಪೋಸ್ ಮಾಡಿದ್ದು ಯಾರು ಇತ್ಯಾದಿ ಪ್ರಶ್ನೆಗಳು ಅಭಿಮಾನಿಗಳಲ್ಲಿ ಮೂಡಿವೆ. ಇವರಿಬ್ಬರೂ ಪರಸ್ಪರ ಪ್ರೇಮಿಸೋಕೆ ಶುರು ಮಾಡಿದ್ದು ತೆಲುಗು ಸಿನಿಮಾವೊಂದರಿಂದ ಎಂದು ಹೇಳಲಾಗುತ್ತಿದೆ.

ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಜೊತೆಯಾಗಿ ತೆಲುಗಿನ ‘ಎವರು’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ಇನ್ನೂ ಬಿಡುಗಡೆ ಆಗಬೇಕಿದೆ. ಈ ಸಿನಿಮಾದಲ್ಲೇ ಇವರಿಬ್ಬರೂ ಪರಸ್ಪರ ಅರ್ಥ ಮಾಡಿಕೊಂಡರು ಎಂದು ಹೇಳಲಾಗುತ್ತಿದೆ. ಅಲ್ಲದೇ, ಗೆಳೆತನ ಗಟ್ಟಿಯಾಗಿ ಆ ನಂತರವಷ್ಟೇ ಮದುವೆ ಆಗುವ ನಿರ್ಧಾರವನ್ನು ತಗೆದುಕೊಂಡಿದ್ದಾರೆ ಎನ್ನುತ್ತಾರೆ ಆಪ್ತರು. ಮದುವೆ ಕುರಿತಾಗಿ ಇಷ್ಟೊಂದು ಸುದ್ದಿಯಾದರೂ, ವಸಿಷ್ಠ ಆಗಲಿ ಅಥವಾ ಹರಿಪ್ರಿಯಾ ಆಗಲಿ ಈ ಕುರಿತು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

vtv vitla
- Advertisement -

Related news

error: Content is protected !!