Sunday, June 29, 2025
spot_imgspot_img
spot_imgspot_img

ಮೆಟ್ರೋದಲ್ಲಿ ಗೋಬಿ ತಿಂದವನಿಗೆ ಬಿತ್ತು ದಂಡ!

- Advertisement -
- Advertisement -

ಮೆಟ್ರೋದಲ್ಲಿ ಪ್ರಯಾಣಿಸುವ ವೇಳೆ ಗೋಬಿ ಮಂಚೂರಿಯನ್ನು ಸೇವಿಸಿದ ವ್ಯಕ್ತಿಗೆ ಅಧಿಕಾರಿಗಳು 500 ರೂ. ದಂಡ ವಿಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ನಿಯಮ ಉಲ್ಲಂಘಿಸಿದ ವ್ಯಕ್ತಿಯನ್ನು ಸುನೀಲ್ ಕುಮಾರ್ ಎಂದು ಗುರುತಿಸಲಾಗಿದೆ. ಮೆಟ್ರೋ ಪ್ರಯಾಣದ ವೇಳೆ ಗೋಬಿ ಸೇವಿಸುತ್ತಿರುವುದನ್ನು ಸ್ನೇಹಿತರು ವೀಡಿಯೋ ಮಾಡಿದ್ದು,ಈ ವೀಡಿಯೋ ವೈರಲ್ ಆಗಿದೆ. ಬಳಿಕ ಈ ವಿಚಾರ ಬಿಎಂಆರ್‌ಸಿಎಲ್ ಅಧಿಕಾರಿಗಳ ಗಮನಕ್ಕೆ ಬಂದಿದ್ದು, ನಿಯಮ ಉಲ್ಲಂಘಿಸಿದ್ದಕ್ಕಾಗಿ ಮೆಟ್ರೋ ನಿಗಮ ಸುನೀಲ್ ಕುಮಾರ್ ನಿಂದ ದಂಡ ವಸೂಲಿ ಮಾಡಿದೆ.‌ ಸುನೀಲ್ ಕುಮಾರ್ ಜಯನಗರದ ಪ್ರತಿಷ್ಠಿತ ಆಭರಣ ಮಳಿಗೆ ಒಂದರ ಉದ್ಯೋಗಿಯಾಗಿದ್ದು, ಪ್ರತಿದಿನ ಸಂಪಿಗೆ ರೋಡ್ ಮೆಟ್ರೋ ನಿಲ್ದಾಣದಿಂದ ಪ್ರಯಾಣ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.

ವೀಡಿಯೋ ಗಮನಕ್ಕೆ ಬಂದ ಬಳಿಕ ಎಂದಿನಂತೆ ನಿಲ್ದಾಣಕ್ಕೆ ಬಂದಾಗ ಆತನನ್ನು ಅಧಿಕಾರಿಗಳು ತಡೆದಿದ್ದಾರೆ. ಬಳಿಕ ದಂಡ ವಿಧಿಸಿ ಜಯನಗರ ಪೊಲೀಸ್ ಠಾಣೆಗೆ ಕರೆದೊಯ್ದು, ಮುಂದೆ ಈ ರೀತಿ ವರ್ತಿಸದಂತೆ ಎಚ್ಚರಿಕೆ ನೀಡಿದ್ದಾರೆ.

- Advertisement -

Related news

error: Content is protected !!