


ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ, ವ್ಯಕ್ತಿಯೊಬ್ಬ ಮಾಹಿತಿ ನೀಡುವುದಾಗಿ ಬರವಣಿಗೆಗೆ ಇರುವ ಪತ್ರವು ಇತ್ತೀಚಿಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಷಯಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನಿಂದ ಗುರುವಾರ ಜಿಲ್ಲಾ ಎಸ್ಪಿ ಹಾಗೂ ಧರ್ಮಸ್ಥಳ ಪೊಲೀಸ್ ಠಾಣೆಗೆ ಸಲ್ಲಿಕೆಯಾಗಿರುವ ದೂರಿನ ಬಗ್ಗೆ ನ್ಯಾಯಾಲಯಕ್ಕೆ ಅನುಮತಿ ಪಡೆದು ಶುಕ್ರವಾರ (ಜುಲೈ 4) ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 39/2025, ಕಲಂ 211(ಎ) ಬಿ ಎನ್ ಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ, ಮುಂದಿನ ಕಾನೂನುಕ್ರಮ ಜರಗಿಸಲಾಗುವುದು ಎಂದು ಜಿಲ್ಲಾ ಎಸ್ಪಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಈ ಹಿಂದೆ ಹಲವಾರು ಅಪರಾಧ ಕೃತ್ಯಗಳು ನಡೆದಿದ್ದು, ದೂರುದಾರರಿಗೆ ಮಾಹಿತಿ ನೀಡಿದ್ದಾರೆ ಜೀವಬೆದರಿಕೆ ಒಡ್ಡಿ, ಈ ಅಪರಾದ ಕೃತ್ಯಗಳ ಮೃತದೇಹಗಳನ್ನು ದೂರುದಾರರ ಮೂಲಕ ರಹಸ್ಯವಾಗಿ ವಿಲೇವಾರಿ ಮಾಡುತ್ತಾರೆ. ಈ ರೀತಿಯಲ್ಲಿ ಹಲವಾರುದೇಹಗಳನ್ನು ದೂರುದಾರರು ವಿಲೇವಾರಿ ಮಾಡಿದ್ದು, ಪ್ರಸ್ತುತ ದೂರುದಾರರಿಗೆ ಪಾಪ ಮೃತ ಪಟ್ಟಿದ್ದಾರೆ, ತನಗೆ ಹಾಗೂ ತನ್ನ ಕುಟುಂಬಕ್ಕೆ ಕಾನೂನಾತ್ಮಕ ರಕ್ಷಣೆ ದೊರೆತ ಕೂಡಲೇ, ಸದ್ರಿ ಅಪರಾಧ ಕೃತ್ಯಗಳನ್ನು ನಡೆಸಿದವರ ಸಂಪೂರ್ಣ ಮಾಹಿತಿ ಹಾಗೂ ತಾನು ಮೃತದೇಹಗಳನ್ನು ವಿಲೇವಾರಿ ಮಾಡಿದ ಸ್ಥಳಗಳನ್ನು ಪೊಲೀಸರಿಗೆ ತೋರಿಸಲು ತಾನು ಸಿದ್ಧವಿದ್ದಾನೆ ಅವರು ಗುರುವಾರ (ಜುಲೈ 3) ಪೊಲೀಸ್ ಅಧಿಕಾರಿಗಳು ಕಚೇರಿಗೆ ಹಾಗೂ ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ಸಲ್ಲಿಕೆಯಾಗಿತ್ತು. ದೂರುದಾರರ ಹೆಸರು ಮತ್ತು ದೂರುದಾರರ ಮಾಹಿತಿ ಪೊಲೀಸ್ ಮೂಲಗಳಿಂದ ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ .