


ಬಂಟ್ವಾಳ: ಜಾಮೀನಿನ ಮೇಲೆ ಬಿಡುಗಡೆಗೊಂಡು ಪ್ರಕರಣದ ವಿಚಾರಣೆಯ ವೇಳೆ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮಾರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನ ವಿಧಿಸಿದೆ.
ಬಂಟ್ವಾಳ ನಗರ ಪೊಲೀಸ್ ಠಾಣಾ ಅ.ಕ್ರ: 139/2007 ಕಲಂ: 366, 420, 120ಬಿ, 368 ಜೊತೆಗೆ 149 ಐ.ಪಿ.ಸಿ ಪ್ರಕರಣದ ಆರೋಪಿ ಬಂಟ್ವಾಳ ಮಂಚಿ ನಿವಾಸಿ ಹಿದಾಯತ್ / ಅಬ್ದುಲ್ಲ ಎಂಬಾತ, ಪ್ರಕರಣದ ವಿಚಾರಣೆಯ ವೇಳೆ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೇ ಡಿಸೆಂಬರ್-2023 ರಿಂದ ತಲೆಮಾರೆಸಿಕೊಂಡಿದ್ದು ಸದ್ಯ ಆತನನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಜು. 10 ರಂದು ಕೇರಳ ಮಂಜೇಶ್ವರದಲ್ಲಿ ಸೆರೆ ಹಿಡಿದು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿರುತ್ತದೆ.ಈ ಆರೋಪಿತನು ಜಾಮೀನಿನ ಮೇಲೆ ಬಿಡುಗಡೆಗೊಂಡು ಆ ಬಳಿಕ ಮಾನ್ಯ ನ್ಯಾಯಾಲಯದ ಅದೇಶವನ್ನು ಉಲ್ಲಂಘಿಸಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದಿರುವ ಹಿನ್ನೆಲೆಯಲ್ಲಿ ಆತನ ವಿರುದ್ದ ಬಂಟ್ವಾಳ ನಗರ ಠಾಣೆಯಲ್ಲಿ ಈ ಜು.10 ರಂದು ಅಕ್ರ: 74/2025 ಕಲಂ: 269 ಬಿ.ಎನ್.ಎಸ್ ರಂತೆ ಪ್ರಕರಣ ದಾಖಲಿಸಲಾಗಿದ್ದು, ಮುಂದಿನ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ಪ್ರಕಟಣೆ ತಿಳಿಸಿದೆ.