- Advertisement -
- Advertisement -



ಸಾಮಾಜಿಕ ಜಾಲತಾಣವಾದ ಪೇಸ್ ಬುಕ್ ಖಾತೆಯಲ್ಲಿ ಸೌಜನ್ಯ ಪರ ಹೋರಾಟಕ್ಕೆ ಸಂಬಂಧಿಸಿದಂತೆ, ಅಶ್ಲೀಲ ಸಂದೇಶವಿರುವ ಪೋಸ್ಟ್ ಪ್ರಸಾರ ಮಾಡಿದ ವಿರುದ್ಧ ಪ್ರಕರಣ ದಾಖಲಾಗಿದೆ.
ಕಡಬ, ಕೌಕ್ರಾಡಿ ಗ್ರಾಮದ ನಿವಾಸಿ ಜಯಂತ ಟಿ (46) ಎಂಬವರು ದಿನಾಂಕ:11-07-2025 ರಂದು ತನ್ನ ಪೇಸ್ ಬುಕ್ ಖಾತೆಯನ್ನು ಪರಿಶೀಲಿಸುತ್ತಿದ್ದಾಗ, ಪ್ರವೀಣ್ ಲೊಬೋ ಎಂಬ ಪೇಸ್ ಬುಕ್ ಖಾತೆಯಲ್ಲಿ ಸೌಜನ್ಯ ಪರ ಹೋರಾಟಕ್ಕೆ ಸಂಬಂಧಿಸಿದಂತೆ, ಅಶ್ಲೀಲ ಸಂದೇಶವಿರುವ ಪೋಸ್ಟ್ ಪ್ರಸಾರ ಮಾಡಿರುವುದು ಕಂಡುಬಂದಿರುತ್ತದೆ. ಈ ಬಗ್ಗೆ ದೂರುದಾರರು ನೀಡಿದ ದೂರಿನ ಮೇರೆಗೆ, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ : 58/2025 ಕಲಂ: 296 ಬಿಎನ್ ಎಸ್ 2023ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದ್ದು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
- Advertisement -








