Saturday, June 28, 2025
spot_imgspot_img
spot_imgspot_img

ಮಂಗಳೂರು: ವಾಟ್ಸಪ್ ಗ್ರೂಪ್‌ನಲ್ಲಿ ಪ್ರಚೋದನಕಾರಿ ಸಂದೇಶ ಫಾರ್ವಡ್; ಪ್ರಕರಣ ದಾಖಲು

- Advertisement -
- Advertisement -

ಇತ್ತೀಚೆಗೆ ಮಂಗಳೂರು ನಗರದ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ “ಮಂಗಳೂರು ಮುಸ್ಲಿಮ್ ಯುವಸೇನೆ” ಎಂಬ ವಾಟ್ಸಪ್ ಗ್ರೂಪ್ ನಲ್ಲಿ ಪ್ರಚೋದನಕಾರಿ ಸಂದೇಶವನ್ನು ಫಾರ್ವಡ್ ಮಾಡಿದ್ದ ಆಧಾರದಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಬಂಧ ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 353(2)ರ ಅಡಿ ಪ್ರಕರಣ ದಾಖಲಾಗಿದೆ. ಈ ಪ್ರಕರಣಗಳನ್ನು ಹೆಚ್ಚಿನ ತನಿಖೆಗಾಗಿ ಮಂಗಳೂರು ನಗರ ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿರುತ್ತದೆ.ಈ ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಪ್ರಚೋದನಕಾರಿ ಸಂದೇಶವನ್ನು ವಾಟ್ಸಪ್ ಗ್ರೂಪ್ ನಲ್ಲಿ ಫಾರ್ವಡ್ ಮಾಡಿದ್ದ ವಿಟ್ಲದ ಮೊಹಮ್ಮದ್ ಆನಾಸ್ ಎಂಬಾತನನ್ನು ಪತ್ತೆ ಮಾಡಿ ವಿಚಾರಣೆ ನಡೆಸುತ್ತಿದ್ದಾರೆ. ಈ ಬಗ್ಗೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

- Advertisement -

Related news

error: Content is protected !!