Tuesday, May 21, 2024
spot_imgspot_img
spot_imgspot_img

ಅವಧಿ ಮೀರಿದ ಇಂಜಕ್ಷನ್ ನೀಡಿದ್ದ ಸಂಜೀವಿನಿ ಆಸ್ಪತ್ರೆ ವಿರುದ್ಧ FIR

- Advertisement -G L Acharya panikkar
- Advertisement -

ಅವಧಿ ಮೀರಿದ ಇಂಜಕ್ಷನ್ ನೀಡಿ ಮೂರು ವರ್ಷದ ಕಂದಮ್ಮ ಆಸ್ಪತ್ರೆಯಲ್ಲಿ ದಾಖಲಾಗುವಂತೆ ಮಾಡಿದ ಬೆಂಗಳೂರಿನ ಸಂಜೀವಿನಿ ಆಸ್ಪತ್ರೆ ವಿರುದ್ಧ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ.

ಎರಡು ವರ್ಷದ ಯಾದ್ವಿ ಎಂಬ ಹೆಣ್ಣುಮಗುವನ್ನು ಪೋಷಕರು ಸಂಜೀವಿನಿ ಆಸ್ಪತ್ರೆಗೆ ಕೊಂಡೊಯ್ದಿದ್ದರು. ಈ ವೇಳೆ ಜ್ವರ ಹೆಚ್ಚಾಗಿದ್ದರಿಂದ ವೈದ್ಯರು, ಡ್ರಿಪ್ಸ್ ಮೂಲಕ ಇಂಜೆಕ್ಷನ್ ನೀಡಿದ್ದರು. ಈ ವೇಳೆ ಮಗುವಿನ ಆರೋಗ್ಯದಲ್ಲಿ ಏರುಪೇರಾಗಿದ್ದು, ಕೂಡಲೇ ಬೇರೊಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇದೇ ವೇಳೆ ಸಂಜೀವಿನಿ ಆಸ್ಪತ್ರೆಯ ಸಿಬ್ಬಂದಿಗಳು ಹಣದ ಆಮಿಷ ಒಡ್ಡಿರುವ ಆರೋಪ ಕೇಳಿಬಂದಿದೆ. ಅಸ್ಪತ್ರೆಯ ವೈದ್ಯರ ನಿರ್ಲಕ್ಷ್ಯ ವಿರುದ್ಧ ಮಗುವಿನ ತಂದೆ ಕಿರಣ್ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಎಫ್​ಐಆರ್ ದಾಖಲಾಗಿದೆ. ಆಸ್ಪತ್ರೆಯ ವಿರುದ್ದ ಆಕ್ರೋಶ ವ್ಯಕ್ತಪಡಿಸಿರುವ ಮಗುವಿನ ಪೋಷಕರು ಏರಿಯಾದ ಎಂಒಎಚ್​ ಅವರಿಗೂ ಮಗುವಿನ ಪೋಷಕರು ದೂರು ನೀಡಿದ್ದರು.

ಘಟನೆ ಸಂಬಂಧ ಮಾತನಾಡಿದ್ದ ಆಸ್ಪತ್ರೆಯ ಮಕ್ಕಳ ತಜ್ಞೆ ಡಾ. ಸಹನ, ಮಗುವಿಗೆ ಅವಧಿ ಮೀರಿದ ಚುಚ್ಚು ಮದ್ದು ಕೊಟ್ಟಿರುವುದು ನಿಜ ಎಂದು ಒಪ್ಪಿಕೊಂಡಿದ್ದಾರೆ. ಡ್ರಿಪ್ಸ್​ನಿಂದ ಆರೋಗ್ಯದಲ್ಲಿ ಸ್ವಲ್ಪ ಏರುಪೇರಾಗಿದೆ. ನಾವು ಕ್ಷಮೆ ಕೇಳುತ್ತೇವೆ. ಸಂಬಂಧಪಟ್ಟ ಸಿಬ್ಬಂದಿಯನ್ನು ಅಮಾನುತುಗೊಳಿಸಲಾಗಿದೆ ಎಂದು ಹೇಳಿದ್ದರು.

- Advertisement -

Related news

error: Content is protected !!