



ಪುತ್ತೂರು: ಹಿಂದೂ ಮುಖಂಡ. ಪುತ್ತಿಲ ಪರಿವಾರ ಸಂಸ್ಥಾಪಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಪುತ್ತೂರು ಮಹಿಳಾ ಠಾಣೆಯಲ್ಲಿ ಮಹಿಳೆಯೊಬ್ಬರು ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.
ಲೈಂಗಿಕ ದೌರ್ಜನ್ಯ ಆರೋಪದಡಿ ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಪುತ್ತೂರಿನ ಮಹಿಳಾ ಠಾಣೆಯಲ್ಲಿ ಐಪಿಸಿ 417, 354A, 506 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರಿನ ಪೈ ವಿಸ್ತಾ ಹೋಟೆಲ್ ಗೆ ಆತ್ಮಹತ್ಯೆ ಮಾಡುವುದಾಗಿ ಬೆದರಿಸಿ 2023ರ ಜೂನ್ ತಿಂಗಳಲ್ಲಿ 47 ವರ್ಷದ ಮಹಿಳೆಯೊಬ್ಬರನ್ನು ಕರೆಸಿಕೊಂಡು ಲೈಂಗಿಕ ದೌರ್ಜನ್ಯ ನಡೆಸಿದ್ದರು. ಆ ಬಳಿಕ ಬ್ಲಾಕ್ ಮೇಲ್ ಮಾಡಿಕೊಂಡು ಅವರಿರುವ ಪ್ರದೇಶಕ್ಕೆ ಕರೆಸಿಕೊಳ್ಳುತ್ತಿದ್ದರು. ಅಭಲೆಯಾದ ತನ್ನ ಪುತ್ರಿಲ ಜೀವನ ಪೂರ್ತಿ ಯಾವುದೇ ಕೊರತೆಯಾಗದಂತೆ ನೋಡಿಕೊಳ್ಳುವುದಾಗಿ ನಂಬಿಸಿ ನನ್ನನ್ನು ದೈಹಿಕ ಹಾಗೂ ಮಾನಸಿಕವಾಗಿ ಬಳಸಿಕೊಳ್ಳುತ್ತಿದ್ದರು. ಅವರೊಂದಿಗೆ ಇದ್ದ ಕ್ಷಣಗಳ ಛಾಯಾ ಚಿತ್ರ, ಸೆಲ್ವಿ, ಆಡಿಯೋ, ವಿಡಿಯೋಗಳು ಇದೆಯೆಂದು ಹೇಳಿಕೊಂಡು ಬೆದರಿಸಿ ಅವರ ಕೆಲಸಗಳನ್ನು ಮಾಡಿಸಿಕೊಳ್ಳುತ್ತಿದ್ದರು.
೨೦೨೪ರ ಲೋಕಸಭಾ ಚುನಾವಣೆಯ ಬಳಿಕ ಮಾತುಕತೆ ಕಡಿಮೆ ಮಾಡಿದ್ದಾರೆ. ಭಯಗೊಂಡು ನಾನು ಪುತ್ತೂರಿಗೆ ವಾಸ ಬದಲಾವಣೆ ಮಾಡಿಕೊಂಡು ಬಾಡಿಗೆ ಮನೆಯಲ್ಲಿ ವಾಸವಿದ್ದೇನೆ. ಉದ್ಯೋಗ ಹಾಗೂ ವರಮಾನವಿಲ್ಲದೆ ಬಾಡಿಗೆ ಮನೆಯಲ್ಲಿದ್ದುಕೊಂಡು ಕಷ್ಟಪಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸಂತ್ರಸ್ತೆ ಮಹಿಳೆ ದೂರಿನಲ್ಲಿ ಹೇಳಿದ್ದಾರೆ.








