- Advertisement -
- Advertisement -
ಕಾರ್ಕಳ : ಕುಕ್ಕುಂದೂರು ಗ್ರಾಮ ಪಂಚಾಯತ್ ವಾಪ್ತಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ರಸ್ತೆಯ ಬಳಿ ಹೊಸದಾಗಿ ನಿರ್ಮಿಸಿರುವ ಮನೆವೊಂದರಲ್ಲಿ ಆಕಸ್ಮಿಕವಾಗಿ ಅಗ್ನಿ ಅವಘಡ ಸಂಭವಿಸಿದ ಘಟನೆ ನಿನ್ನೆ ಬೆಳಗ್ಗೆ ನಡೆದಿದೆ.
ಆಲ್ಫಾ ಕಾಟೇಜ್ ಆಯೀಝ್ ಹಬೀದ್ ಖಾನ್ ಎಂಬವರಿಗೆ ಸೇರಿದ ಮನೆಯಲ್ಲಿ ಅಗ್ನಿ ದುರಂತ ಸಂಭವಿಸಿದೆ. ಘಟನೆಯಲ್ಲಿ ಸುಮಾರು 2,00,000 ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.
ಘಟನಾ ಸ್ಥಳಕ್ಕೆ ತಕ್ಷಣ ಕಾರ್ಕಳ ಅಗ್ನಿಶಾಮಕ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ದೌಡಾಯಿಸಿ ಬೆಂಕಿಯನ್ನು ಸಂಪೂರ್ಣ ನಂದಿಸಿರುತ್ತಾರೆ. ಈ ಮೂಲಕ ಕಾರ್ಯಾಚರಣೆಯಲ್ಲಿ ಹೆಚ್ಚಿನ ಪ್ರಮಾಣದ ಅನಾಹುತವನ್ನು ತಪ್ಪಿಸಿದ್ದಾರೆ ಎಂದು ತಿಳಿದುಬಂದಿದೆ.
- Advertisement -