Sunday, July 6, 2025
spot_imgspot_img
spot_imgspot_img

ಮಂಗಳೂರು: ಅಡುಗೆ ಮಾಡುವ ವೇಳೆ ಗ್ಯಾಸ್ ಸಿಲಿಂಡರ್ ಗೆ ಬೆಂಕಿ

- Advertisement -
- Advertisement -

ಮಂಗಳೂರು: ಮನೆಯಲ್ಲಿ ಅಡುಗೆ ಮಾಡುವ ವೇಳೆ ಗ್ಯಾಸ್ ಸಿಲಿಂಡರ್ ಗೆ ಬೆಂಕಿ ಹೊತ್ತಿಕೊಂಡ ಘಟನೆ ನಗರದ ಅತ್ತಾವರದಲ್ಲಿ ಶುಕ್ರವಾರ(ಡಿ.6) ನಡೆದಿದೆ.

ಮನೆ ಮಂದಿ ಅಡುಗೆ ಮಾಡುವ ವೇಳೆ ಗ್ಯಾಸ್ ಸಿಲಿಂಡರ್ ನ ರೇಗ್ಯುಲೇಟರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಮನೆಮಂದಿ ಮನೆಯಿಂದ ಹೊರ ಓಡಿ ಬಂದಿದ್ದಾರೆ.ಬಳಿಕ ಪಾಂಡೇಶ್ವರ ಅಗ್ನಿ ಶಾಮಕ ದಳದವರು ಬಂದು ಬೆಂಕಿ ನಂದಿಸಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ.

- Advertisement -

Related news

error: Content is protected !!