- Advertisement -
- Advertisement -



ಮಾಣಿಲ:ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡು ಅರಣ್ಯದಲ್ಲಿದ್ದ ಗಿಡಮರಗಳು ಬೆಂಕಿಗಾಹುತಿಯಾದ ಘಟನೆ ಮಾಣಿಲ ಮುರುವ ಡಬಲ್ ಕಟ್ಟಿಂಗ್ ಎಂಬಲ್ಲಿ ನಡೆದಿದೆ.
ಅರಣ್ಯದಲ್ಲಿ ಬೆಂಕಿ ಆರವರಿಸುತ್ತಿದ್ದಂತೆಯೇ ಸಾರ್ವಜನಿಕರ ಗಮನಕ್ಕೆ ಬಂದಿದ್ದು, ಕೂಡಲೇ ಬೆಂಕಿ ನಂದಿಸುವಲ್ಲಿ ಸಾರ್ವಜನಿಕರು ಶ್ರಮ ಪಟ್ಟಿದ್ದಾರೆ. ಆದರೆ ಬೆಂಕಿಯ ತೀವ್ರತೆ ಹೆಚ್ಚುತ್ತಿದ್ದಂತೆ ಸಾರ್ವಜನಿಕರು ಅಗ್ನಿ ಶಾಮಕ ದಳದವರನ್ನು ಸಂಪರ್ಕಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿ ಶಾಮಕ ದಳದವರು ಬೆಂಕಿ ನಂದಿಸುವಲ್ಲಿ ಹರಸಾಹಸ ಪಡುತ್ತಿದ್ದು, ಬೆಂಕಿ ನಂದಿಸುವ ಕಾರ್ಯ ಮುಂದುವರೆದಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಈ ಅವಘಡ ಸಂಭವಿಸಿದೆಂದು ಸಾರ್ವಜನಿಕರು ತಿಳಿಸಿದ್ದಾರೆ.
- Advertisement -