Sunday, May 5, 2024
spot_imgspot_img
spot_imgspot_img

ಹ್ಯಾಂಡ್ ಗ್ಲೌಸ್ ತಯಾರಿಕಾ ಕಾರ್ಖಾನೆಯಲ್ಲಿ ಅಗ್ನಿ ಅವಘಡ; ಆರು ಮಂದಿ ಸಜೀವ ದಹನ

- Advertisement -G L Acharya panikkar
- Advertisement -

ಹ್ಯಾಂಡ್ ಗ್ಲೌಸ್ ತಯಾರಿಕಾ ಕಾರ್ಖಾನೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಆರು ಮಂದಿ ಕಾರ್ಮಿಕರು ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಸಂಭಾಜಿ ನಗರದಲ್ಲಿ ನಡೆದಿದೆ.

ನಸುಕಿನ ಜಾವ ಬೆಂಕಿ ಕಾಣಿಸಿಕೊಂಡಿದೆ. ಈ ಘಟನೆಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ.

ಹಿರಿಯ ಪೊಲೀಸ್​ ಅಧಿಕಾರಿ ಮಾತನಾಡಿ ಇಂದು ನಸುಕಿನ ಜಾವ ಈ ದುರ್ಘಟನೆ ಸಂಭವಿಸಿದ್ದು, ಕಾರ್ಖಾನೆಯಲ್ಲಿದ್ದ ಆರು ಮಂದಿ ಕಾರ್ಮಿಕರು ಸಜೀವ ದಹನವಾಗಿದ್ದಾರೆ. ಘಟನೆಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರ್ಖಾನೆ ಒಳಗೆ ಇನ್ನಷ್ಟು ಮಂದಿ ಸಿಲುಕಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದಿದ್ದಾರೆ. ಈ ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆಗೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!