- Advertisement -
- Advertisement -



ಬೆಳಗಾವಿ: ಶಾರ್ಟ್ ಸರ್ಕ್ಯೂಟ್ನಿಂದ ಟೇಪ್ ತಯಾರಿಕಾ ಕಾರ್ಖಾನೆ ಹೊತ್ತಿ ಉರಿದ ಘಟನೆ ತಾಲೂಕಿನ ನಾವಗೆ ಗ್ರಾಮದಲ್ಲಿ ನಡೆದಿದೆ. ಕಾರ್ಖಾನೆಯಲ್ಲಿ 200 ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಸ್ನೇಹಂ ಕಾರ್ಖಾನೆಯಲ್ಲಿ ಲಿಫ್ಟ್ನಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಈ ಅವಘಡ ನಡೆದಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಬಂದಿದ್ದು, ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.
ಒಳಗೆ ಹಲವು ಜನ ಕಾರ್ಮಿಕರು ಸಿಲುಕಿರುವ ಶಂಕೆ ಇದ್ದು, ಘಟನಾ ಸ್ಥಳಕ್ಕೆ ಲ್ಲಾಧಿಕಾರಿ ಮೊಹಮ್ಮದ್ ರೋಷನ್, ಬೆಳಗಾವಿ ಗ್ರಾಮೀಣ ಠಾಣೆ ಪೊಲೀಸರ ಭೇಟಿ, ಪರಿಶೀಲನೆ ನಡೆಸುತ್ತಿದ್ದಾರೆ.
- Advertisement -