Monday, June 15, 2026
spot_imgspot_img
spot_imgspot_img

ದ್ವಿಚಕ್ರ ವಾಹನ ಶೋ ರೂಂನಲ್ಲಿ ಅಗ್ನಿ ಅವಘಡ; ಮಾಜಿ ಉದ್ಯೋಗಿ ಪೊಲೀಸ್ ವಶ..!

- Advertisement -
- Advertisement -

ಶಿವಮೊಗ್ಗ : ಕಾರ್ತಿಕ್‌ ಮೋಟರ್ಸ್‌ ಶೋ ರೂಂನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ ಘಟನೆ ಶಿವಮೊಗ್ಗ ಎನ್‌.ಟಿ.ರಸ್ತೆ ಜಂಕ್ಷನ್‌ನಲ್ಲಿ ನಡೆದಿದೆ. ಬೆಂಕಿಯಿಂದಾಗಿ ಶೋ ರೂಂನಲ್ಲಿ ಕೆಲವು ವಾಹನಗಳಿಗೆ ಹಾನಿಯಾಗಿದ್ದು ಲಕ್ಷಾಂತರ ರೂಪಾಯಿಗಳ ನಷ್ಟ ಸಂಭವಿಸಿದೆ.

ಬೆಂಕಿ ಆವರಿಸುತ್ತಿದ್ದಂತೆ ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ನೀಡಿದ್ದು ಕಾರ್ಯಾಚರಣೆ ನಡೆಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಮೂರ್ನಾಲ್ಕು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದವು. ಇನ್ನು, ಬೆಂಕಿ ಹೊತ್ತಿಕೊಂಡ ವಿಷಯ ತಿಳಿಯುತ್ತಿದ್ದಂತೆ ಶೋ ರೂಂ ಮುಂಭಾಗ ದೊಡ್ಡ ಸಂಖ್ಯೆಯಲ್ಲಿ ಜನ ಜಮಾಯಿಸಿದ್ದರು.

ಇನ್ನು ಮಾಜಿ ಉದ್ಯೋಗಿಯೇ ಶೋ ರೂಂಗೆ ಬೆಂಕಿ ಹಚ್ಚಿದ್ದಾನೆ ಎಂದು ಆರೋಪಿಸಲಾಗಿದ್ದು ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ದೊಡ್ಡಪೇಟೆ ಠಾಣೆಯಲ್ಲಿ ಆತನ ವಿಚಾರಣೆ ನಡೆಯುತ್ತಿದೆ. ಘಟನೆಯಿಂದಾಗಿ ಕಾರ್ತಿಕ್‌ ಮೋಟರ್ಸ್‌ ಶೂಂನಲ್ಲಿ ದೊಡ್ಡ ಮಟ್ಟದ ವಸ್ತುಗಳು ಅಗ್ನಿಗೆ ಆಹುತಿಯಾಗಿವೆ.

ಒಳಾಂಗಣ ವಿನ್ಯಾಸ, ಕೆಲವು ವಾಹನಗಳು, ಎಲೆಕ್ಟ್ರಾನಿಕ್‌ ಉಪಕರಣಗಳು ಹಾನಿಗೀಡಾಗಿವೆ. ಮೇಲ್ನೋಟಕ್ಕೆ ಲಕ್ಷಾಂತರ ರೂ. ನಷ್ಟವಾಗಿರುವುದು ಗೋಚರಿಸುತ್ತದೆ. ನಷ್ಟದ ಅಂದಾಜು ಇನ್ನಷ್ಟೆ ಆಗಬೇಕಿದೆ. ಬೆಳಗ್ಗೆ ಕೆಲಸಕ್ಕೆ ಬಂದ ಶೋ ರೂಂ ಸಿಬ್ಬಂದಿ ಬೆಂಕಿ ಹೊತ್ತಿಕೊಂಡಿದ್ದನ್ನು ಗಮನಿಸಿ ದಿಗ್ಭ್ರಾಂತರಾಗಿ ಹೊರಗೆ ನಿಂತಿದ್ದರು. ಶೋ ರೂಂ ಒಳಗಿದ್ದ ವಾಹನಗಳನ್ನು ತಕ್ಷಣಕ್ಕೆ ಹೊರಗೆ ತಂದು ನಿಲ್ಲಿಸಿ ಹಾನಿ ಪ್ರಮಾಣ ಕಡಿಮೆ ಮಾಡಿದ್ದಾರೆ.

- Advertisement -

Related news

error: Content is protected !!