Tuesday, July 28, 2026
spot_imgspot_img
spot_imgspot_img

ಮಹಾರಾಷ್ಟ್ರದ ಬಹುಮಹಡಿ ವಸತಿ ಕಟ್ಟಡದಲ್ಲಿ ಅಗ್ನಿ ಅವಘಡ: 4 ಸಾವು; 10 ಮಂದಿಗೆ ಗಾಯ

- Advertisement -
- Advertisement -

ಮುಂಬೈ: ಮಹಾರಾಷ್ಟ್ರದ ನವಿ ಮುಂಬೈ ಟೌನ್‌ಶಿಪ್‌ನಲ್ಲಿರುವ ಬಹುಮಹಡಿ ವಸತಿ ಕಟ್ಟಡದ 10ನೇ ಫ್ಲೋರ್‌ನಲ್ಲಿರುವ ಫ್ಲಾಟ್‌ನಲ್ಲಿ ಸೋಮವಾರ ತಡರಾತ್ರಿ ಅಗ್ನಿ ಅವಘಡ ಸಂಭವಿದ ಘಟನೆ ಸೋಮವಾರ ಮಧ್ಯರಾತ್ರಿ 12:30ರ ಸುಮಾರಿಗೆ ನಡೆದಿದೆ. ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಬೆಂಕಿಯ ಕೆನ್ನಾಲಿಗೆ 11 ಮತ್ತು 12ನೇ ಮಹಡಿಗೂ ಹರಡಿದೆ. ಬೆಂಕಿ ಅವಘಡದಲ್ಲಿ ಇಬ್ಬರು ಮಹಿಳೆಯರು, ಒಬ್ಬ ಪುರುಷ ಮತ್ತು 6 ವರ್ಷದ ಬಾಲಕಿ ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ವಾಶಿಯ ಎರಡು ಆಸ್ಪತ್ರೆಗಳಿಗೆ ರವಾನಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬೆಂಕಿ ಅವಘಡದ ಕುರಿತು ಮಾಹಿತಿ ದೊರೆಯುತ್ತಿದ್ದಂತೆ 40 ಅಗ್ನಿಶಾಮಕ ದಳದ ಸಿಬ್ಬಂದಿ, 8 ಅಗ್ನಿಶಾಮಕ ದಳ ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದರು. ಮಂಗಳವಾರ ಬೆಳಗ್ಗೆ 4 ಗಂಟೆಯ ಸುಮಾರಿಗೆ ಬೆಂಕಿಯನ್ನು ನಂದಿಸುವಲ್ಲಿ ಅಗ್ನಿಶಾಮಕ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಅಗ್ನಿ ಅವಘಡಕ್ಕೆ ಕಾರಣ ಏನು ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ.

- Advertisement -

Related news

error: Content is protected !!