Monday, June 22, 2026
spot_imgspot_img
spot_imgspot_img

ಬಾಂಬೆ ಬಿಗ್ ಬಜಾರ್‌ನಲ್ಲಿ ಅಗ್ನಿ ಅವಘಡ; ಲಕ್ಷಾಂತರ ರೂ.ನಷ್ಟ

- Advertisement -
- Advertisement -

ಬಾಂಬೆ ಬಿಗ್ ಬಜಾರ್ ಬಟ್ಟೆ ಅಂಗಡಿಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೆಬೆನ್ನೂರಿನಲ್ಲಿ ನಡೆದಿದೆ.

ಬುಧವಾರ ಮುಂಜಾನೆ ಈ ಅಗ್ನಿಅನಾಹುತ ಸಂಭವಿದ್ದು ವಿದ್ಯುತ್ ಶಾರ್ಟ್ ಶರ್ಕ್ಯೂಟ್ ಕಾರಣವೆಂದು ಶಂಕಿಸಲಾಗಿದೆ. ಅಂಗಡಿ ಸಂಪೂರ್ಣ ಸುಟ್ಟು ಹೋಗಿದೆ. ಬೆಂಕಿ ಕೆನ್ನಾಲಿಗೆ 40 ಲಕ್ಷದಷ್ಟು ಬಟ್ಟೆ ಹಾಗೂ ವಸ್ತುಗಳು ಬೆಂಕಿಗೆ ಸುಟ್ಟು‌ ಭಸ್ಮವಾಗಿವೆ. ಬಟ್ಟೆ ಅಂಗಡಿಯ ಪಕ್ಕದಲ್ಲಿದ್ದ ವಿದ್ಯುತ್ ಕಂಬದಿಂದ ಕಿಡಿ ತಗುಲಿ ಬಟ್ಟೆ ಅಂಗಡಿಗೆ ಬೆಂಕಿ ಬಿದ್ದಿದೆ ಎನ್ನಲಾಗಿದೆ.

ಅಂಗಡಿಯಲ್ಲಿದ್ದ ಬಟ್ಟೆಗಳು ಸಂಪೂರ್ಣ ಅಗ್ನಿಗಾಹುತಿಯಾಗಿವೆ. ಬೆಂಕಿಯ ಕೆನ್ನಾಲಿಗೆ ಬಟ್ಟೆ ಅಂಗಡಿಯ ಪಕ್ಕದಲ್ಲಿದ್ದ ಹೋಟೆಲ್‌ಗೂ ವ್ಯಾಪಿಸಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ. ಸಂತೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!