Sunday, June 29, 2025
spot_imgspot_img
spot_imgspot_img

ಕೆನಡಾದಲ್ಲಿ ಬೆಂಕಿ ಅವಘಡ; ಭಾರತ ಮೂಲದ ದಂಪತಿ ಸಹಿತ ಪುತ್ರಿ ಸಾವು..!

- Advertisement -
- Advertisement -

ಭಾರತೀಯ ಮೂಲದ ಕುಟುಂಬವೊಂದು ಕೆನಡಾದ ಒಂಟಾರಿಯೊದಲ್ಲಿ ನಿಗೂಢವಾಗಿ ಮೃತಪಟ್ಟ ಘಟನೆಯೊಂದು ಬೆಳಕಿಗೆ ಬಂದಿದೆ. ಕೆನಡಾದ ಒಂಟಾರಿಯೊ ಪ್ರಾಂತ್ಯದ ಕಟ್ಟಡವೊಂದರಲ್ಲಿ ಸಂಭವಿಸಿದ ಬೆಂಕಿ ಅನಾಹುತದಲ್ಲಿ ಭಾರತ ಮೂಲದ ದಂಪತಿ ಹಾಗೂ ಅವರ ಪುತ್ರಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ.

ಮೃತಪಟ್ಟವರನ್ನು ರಾಜೀವ್ ವಾರಿಕೂ (51), ಶಿಲ್ಪಾ ಕೋಥಾ (47) ಮತ್ತು ಮಾಹೆಕ್ ವಾರಿಕೂ (16) ಎಂದು ಗುರುತಿಸಲಾಗಿದೆ.

ಮಾರ್ಚ್ 7 ರಂದು ಬ್ರಾಂಪ್ಟನ್‌ನ ಬಿಗ್ ಸ್ಕೈ ವೇ ಮತ್ತು ವ್ಯಾನ್ ಕಿರ್ಕ್ ಡ್ರೈವ್ ಪ್ರದೇಶದಲ್ಲಿ ವಾಸವಿದ್ದ ಕುಟುಂಬ ಮನೆಗೆ ಬೆಂಕಿ ತಗುಲಿ ಮೂವರು ಮೃತಪಟ್ಟಿದ್ದಾರೆ ಎನ್ನಲಾಗಿದ್ದು. ಆದರೆ ಮನೆಗೆ ಬೆಂಕಿ ಹೇಗೆ ಹೊತ್ತಿಕೊಂಡಿತು ಎಂಬುದು ನಿಗೂಢವಾಗಿದೆ ಎನ್ನುತ್ತಾರೆ ಪೊಲೀಸರು. ಮೂವರ ಮೃತದೇಹಗಳು ಸುಟ್ಟು ಕರಕಲಾದ ಸ್ಥಿತಿಯಲ್ಲಿ ದೊರಕಿವೆ. ಬೆಂಕಿ ಕಾಣಿಸಿಕೊಂಡ ಕಟ್ಟಡದಲ್ಲಿ ಇವರು ವಾಸವಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಕಿ ಹೊತ್ತಿಕೊಂಡ ಕುರಿತು ಅಕ್ಕಪಕ್ಕದ ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಮತ್ತು ಅಗ್ನಿಶಾಮ ಸಿಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸುವಷ್ಟರಲ್ಲಿ ಮನೆ ಸಂಪೂರ್ಣ ಸುಟ್ಟು ಹೋಗಿತ್ತು ಪ್ರಕರಣ ಸಂಬಂಧ ತನಿಖೆ ನಡೆಸಲಾಗುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

- Advertisement -

Related news

error: Content is protected !!