- Advertisement -
- Advertisement -




ಮಂಗಳೂರು : ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಬಿಎಂಡಬ್ಲ್ಯು ಕಾರಿನಲ್ಲಿ ಇದ್ದಕಿದ್ದಂತೆ ಬೆಂಕಿ ಹೊತ್ತಿಕೊಂಡು ಉರಿದ ಘಟನೆ ಅಡ್ಯಾರ್ ಸಹ್ಯಾದ್ರಿ ಕಾಲೇಜು ಸಮೀಪ ಇಂದು ನಡೆದಿದೆ.
ಶಾರ್ಟ್ ಸರ್ಕ್ಯೂಟ್ ನಿಂದ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗುತ್ತಿದ್ದು, ಕಾರಿನಲ್ಲಿ ಹೊಗೆ ಕಾಣಿಸಿಕೊಂಡ ಕೂಡಲೇ ಚಾಲಕ ಕಾರಿನಿಂದ ಕೆಳಗಿಳಿದಿದ್ದಾರೆ ಎಂದು ತಿಳಿದು ಬಂದಿದೆ.
ದೆಹಲಿ ನೋಂದಾಯಿತ ಬಿಎಂಡಬ್ಲ್ಯೂ ಕಾರು ಅರ್ಧಗಂಟೆಯಿಂದ ಹೊತ್ತಿ ಉರಿಯುತ್ತಿದ್ದು, ಸಂಪೂರ್ಣ ಭಸ್ಮವಾಗಿದೆ.ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಸುಟ್ಟು ಕರಕಲಾದ ಪರಿಣಾಮ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು
- Advertisement -








