Monday, May 6, 2024
spot_imgspot_img
spot_imgspot_img

ಎಟಿಎಂ ನಲ್ಲಿ ಅಗ್ನಿ ಅವಘಡ; 5 ಲಕ್ಷ ರೂ. ಬೆಂಕಿಗಾಹುತಿ..!

- Advertisement -G L Acharya panikkar
- Advertisement -

ಕಾಫಿನಾಡು ಚಿಕ್ಕಮಗಳೂರು ನಗರದ ಐಜಿ ರಸ್ತೆಯ ಸಾರಗೋಡು ಆರ್ಕೆಡ್​ನಲ್ಲಿರುವ ಕರ್ಣಾಟಕ ಬ್ಯಾಂಕ್ ಎಟಿಎಂ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಎಟಿಎಂ ನಲ್ಲಿದ್ದ 5 ಲಕ್ಷ ಹಣ ಭಸ್ಮವಾದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಜೊತೆಗೆ 15 ಲಕ್ಷ ಮೌಲ್ಯದ ಎಟಿಎಂ ಯಂತ್ರ ಕೂಡ ಸಂಪೂರ್ಣ ಭಸ್ಮವಾಗಿದೆ. ಶಾರ್ಟ್ ಸರ್ಕ್ಯೂಟ್​ನಿಂದ ಈ ಎಟಿಎಂಗೆ ಬೆಂಕಿ ತಗುಲಿರುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ. ಎಟಿಎಂಗೆ ಬೆಂಕಿ ಹೊತ್ತಿಕೊಂಡ ಮಾಹಿತಿಯನ್ನು ಹೈದರಾಬಾದ್ ಬ್ಯಾಂಕ್ ಕಂಟ್ರೋಲ್ ರೂಮ್ ​ ಅಗ್ನಿಶಾಮಕ ದಳಕ್ಕೆ ರವಾನಿಸಿದೆ. ಕೂಡಲೆ ಸ್ಥಳಕ್ಕೆ ಧಾವಿಸಿದ ಚಿಕ್ಕಮಗಳೂರು ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ.ಆದರೆ ಅದಾಗಲೇ ನಗದು ಸಹಿತ ಎಟಿಎಂ ಮಷೀನ್ ಸುಟ್ಟು ಕರಕಲಾಗೆ. ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!