- Advertisement -
- Advertisement -




ದೆಹಲಿಯ ಪಂತ್ ಮಾರ್ಗ್‌ನಲ್ಲಿರುವ ಬಿಜೆಪಿ ಕಚೇರಿಯಲ್ಲಿ ದಿಢೀರನೆ ಬೆಂಕಿ ಕಾಣಿಸಿಕೊಂಡಿದ್ದು, ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ದಳದ ವಾಹನಗಳನ್ನು ಕಳುಹಿಸಿದ್ದಾರೆ ಎಂದು ವರದಿಯಾಗಿದೆ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎನ್ನಲಾಗಿದೆ
ಅಧಿಕಾರಿಗಳ ಪ್ರಕಾರ, ನಿನ್ನೆ ಸಂಜೆ 4.25 ರ ಸುಮಾರಿಗೆ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಅಗ್ನಿ ಅವಘಡದ ಕುರಿತು ಮಾಹಿತಿ ಬಂದಿತು.
ಬೆಂಕಿ ಅವಘಡಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎನ್ನಲಾಗುತ್ತಿದೆ. ವಿದ್ಯುತ್ ವೈರಿಂಗ್ ಸಮಸ್ಯೆಯಿಂದ ಬೆಂಕಿ ಹೊತ್ತಿಕೊಂಡಿದೆ. ಸದ್ಯಕ್ಕೆ ಯಾರಿಗೂ ಗಾಯಗಳಾಗಿಲ್ಲ. ನಾವು ನೀರಿನ ಟ್ಯಾಂಕರ್ ಮತ್ತು ಅಗ್ನಿಶಾಮಕ ಇಂಜಿನ್ ಅನ್ನು ನಿಯೋಜಿಸಿದ್ದೇವೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
- Advertisement -