Monday, April 29, 2024
spot_imgspot_img
spot_imgspot_img

ಪುತ್ತೂರು: ತಾಲೂಕು ಸಾರ್ವಜನಿಕ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಬೆಂಕಿ ಅವಘಡ

- Advertisement -G L Acharya panikkar
- Advertisement -

ಪುತ್ತೂರು: ತಾಲೂಕು ಸಾರ್ವಜನಿಕ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಅಗ್ನಿಶಾಮಕದಳ ಬೆಂಕಿ ನಂದಿಸುವಲ್ಲಿ ಯಶಸ್ಸಿಯಾಗಿದೆ.
ಹವಾನಿಯಂತ್ರಿತ ಘಟಕದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ಬೆಂಕಿ ತಗುಲಿದ್ದು, ತಕ್ಷಣ ತೀವ್ರ ನಿಗಾ ಘಟಕದಲ್ಲಿದ್ದ ರೋಗಿಗಳನ್ನು ಸುರಕ್ಷಿತ ಸ್ಥಳಕ್ಕೆ ವರ್ಗಾವಣೆ ಮಾಡಲಾಗಿದೆ. ಅಗ್ನಿ ಶಾಮಕ ದಳದ ನೆರವಿನಿಂದ ಬೆಂಕಿ ನಂದಿಸುವ ಕೆಲಸ ವಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಆಶಾ ಪುತ್ತೂರಾಯ ಅವರು, ” ಹವಾನಿಯಂತ್ರಿತ ಘಟಕದ ಚಿಪ್ಪು ಒಡೆದ ಪರಿಣಾಮ ಬೆಂಕಿ ಕಾಣಿಸಿಕೊಂಡಿದೆ, ಹವಾನಿಯಂತ್ರಿತ ಯಂತ್ರ ಸಹಿತ ಅದರ ಬಳಿ ಇದ್ದ ಕೆಲವು ಉಪಕರಣಕ್ಕೆ ಹಾನಿಯಾಗಿದೆ. ತಿವ್ರ ನಿಗಾ ಘಟಕದಲ್ಲಿ ಇಬ್ಬರು ರೋಗಿಗಳಿದ್ದು, ಅವರನ್ನು ಸುರಕ್ಷಿತ ಸ್ಥಳಕ್ಕೆ ವರ್ಗಾವಣೆ ಮಾಡಲಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ. ತಡ ರಾತ್ರಿ 12:30 ರಿಂದ 1 ಗಂಟೆಯ ಸುಮಾರಿಗೆ ಘಟನೆ ನಡೆದಿದೆ. ತಕ್ಷಣವೇ ಅಗ್ನಿಶಾಮಕ ದಳದವರು ಬೆಂಕಿ ನಂದಿಸಿ ದೋಡ್ಡ ಅನಾಹುತ ತಪ್ಪಿತು. ಬೆಂಕಿ ಕಾಣಿಸಿಕೊಂಡ ತಕ್ಷಣವೇ ಆಸ್ಪತ್ರೆ ಆಡಳಿತ ಅಧಿಕಾರಿ ಡಾ.ಅಶಾ ಪುತ್ತೂರಾಯ ಮತ್ತು ಆಸ್ಪತ್ರೆ ಸಿಬ್ಬಂದಿಗಳು ರೋಗಿಗಳನ್ನು ಬೆಂಕಿ ತಗುಲಿದ ಕೊಠಡಿಯಿಂದ ತೆರವುಗೊಳಿಸಿದ್ದರು .

ಪುತ್ತೂರಿನ ಶಾಸಕರಿಗೆ ವಿಷಯ ತಿಳಿದ ತಕ್ಷಣವೇ ಮಂಗಳೂರಿನಿಂದ ಘಟನಾ ಸ್ಥಳಕ್ಕೆ ಶಾಸಕ ಅಶೋಕ್ ರೈಯವರು ಧಾವಿಸಿದ್ದಾರೆ. ಪುತ್ತೂರಿನ ವಿಹಿಂಪ ಕಛೇರಿಯಲ್ಲಿ ತಂಗಿದ್ದ ದತ್ತ ಮಾಲಾಧಾರಿಗಳು, ಹಾಗೂ ಸ್ಥಳೀಯ ಯುವಕರು ಬೆಂಕಿ ನಂದಿಸಲು ಅಗ್ನಿ ಶಾಮಕ ದಳಕ್ಕೆ ನೆರವಾಗಿದ್ದಾರೆ ಹಾಗೂ ಇಡೀ ಆಸ್ಪತ್ರೆಯಲ್ಲಿ ಬೂದಿಗಳಿಂದ ಕೂಡಿದ ಕೊಠಡಿಗಳನ್ನು ನೀರಿನಿಂದ ಸ್ವಚ್ಛಗೊಳಿಸಿದ್ದಾರೆ.

- Advertisement -

Related news

error: Content is protected !!