Thursday, May 16, 2024
spot_imgspot_img
spot_imgspot_img

ಮಿರಾಕಲ್ ಡ್ರಿಂಕ್ಸ್ ಕಟ್ಟಡದಲ್ಲಿ ಅಗ್ನಿ ಅವಘಡ

- Advertisement -G L Acharya panikkar
- Advertisement -

ಮಿರಾಕಲ್ ಡ್ರಿಂಕ್ಸ್ ಕಟ್ಟಡದಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ ಘಟನೆ ಬೆಂಗಳೂರಿನ ಆರ್.ಟಿ.ನಗರದಲ್ಲಿ ನಡೆದಿದೆ.
ಕಟ್ಟಡದಲ್ಲಿ 10ಕ್ಕೂ ಹೆಚ್ಚು ಜನರು ಸಿಲುಕಿದ್ದು, ಅವರನ್ನು ಸುರಕ್ಷಿತವಾಗಿ ಹೊರತರಲಾಗಿದೆ. ಇನ್ನು ವಿಷಯ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಆರ್.ಟಿ.ನಗರ ಪೊಲೀಸರ ಸ್ಥಳಕ್ಕೆ ಆಗಮಿಸಿದ್ದು, ಪಕ್ಕದ ಕಟ್ಟಡಕ್ಕೆ ಏಣಿ ಇಟ್ಟು ಕಟ್ಟಡದಲ್ಲಿದ್ದವರ ರಕ್ಷಣಾ ಕಾರ್ಯಚರಣೆ ನಡೆಸಿದ್ದಾರೆ.

ಕಟ್ಟಡದ ನೆಲಮಹಡಿಯಲ್ಲಿದ್ದ ಡಿಜಿ ಸ್ಫೋಟಗೊಂಡು ಬೆಂಕಿ ಅವಘಡ ಸಂಭವಿಸಿದ್ದು, ಅಗ್ನಿ ಶಾಮಕ ದಳ ಮತ್ತು ಪೊಲೀಸರು ಬೆಂಕಿ ನಂದಿಸುವ ಕಾರ್ಯದ ಜೊತೆ ಕಟ್ಟದಲ್ಲಿ ಸಿಲುಕಿಕೊಂಡವರ ರಕ್ಷಣಾ ಕಾರ್ಯಚರಣೆ ನಡೆಸಿದ್ದಾರೆ.

ಮೊದಲಿಗೆ ಡಿಜೆ ಸ್ಫೋಟಗೊಂಡು ಮಿರಾಕಲ್ ಡ್ರಿಂಕ್ಸ್ ನ ಗ್ರೌಂಡ್ ಫ್ಲೋರ್ ಕಚೇರಿಯಲ್ಲಿ ಬೆಂಕಿ ಉಂಟಾಗಿತ್ತು. ತದನಂತರ ಬೆಂಕಿಯ ಕೆನ್ನಾಲಿಗೆ ಎರಡೂ ಫ್ಲೋರ್​ಗೂ ವ್ಯಾಪಿಸಿದೆ. ಬೆಂಕಿ, ಹೊಗೆಯಿಂದ ಕಟ್ಟಡದಿಂದ ಹೊರಬರಲು ಸಿಬ್ಬಂದಿಗಳು ಪರದಾಡಿದ್ದಾರೆ. ಬಳಿಕ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಏಣಿ ಮೂಲಕ ಪಕ್ಕದ ಕಟ್ಟಡಕ್ಕೆ ಸಿಬ್ಬಂದಿಯನ್ನು ಸ್ಥಳಾಂತರಿಸಿದ್ದಾರೆ. ಸದ್ಯ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಘಟನೆಯಲ್ಲಿ ಯಾರಿಗೂ ಪ್ರಾಣಾಪಾಯವಾಗಿಲ್ಲ. ಕೆಲವರಿಗೆ ಬೆಂಕಿಯ ಹೊಗೆಯಿಂದ ಉಸಿರಾಟದ ಸಮಸ್ಯೆಯಾಗಿದ್ದು, ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.

- Advertisement -

Related news

error: Content is protected !!