Thursday, July 23, 2026
spot_imgspot_img
spot_imgspot_img

ಚಲಿಸುತ್ತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ; ಹೊತ್ತಿ ಉರಿದ ಕಾರು

- Advertisement -
- Advertisement -

ಶಿವಮೊಗ್ಗ : ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕಾರು ಸಂಪೂರ್ಣವಾಗಿ ಸುಟ್ಟು ಹೋಗಿದ್ದು, ಕಾರು ಚಾಲಕ ಪ್ರಾಣಾಪಾಯದಿಂದ ಪಾರಾದ ಘಟನೆ ತೀರ್ಥಹಳ್ಳಿಯ ನಾಲೂರು ಕೊಳಿಗೆ ಬಳಿ ನಡೆದಿದೆ.

ಉಡುಪಿಯಿಂದ ಸೊರಬಕ್ಕೆ ಡಸ್ಟರ್ ಕಾರು ತೆರಳುತ್ತಿತ್ತು. ತೀರ್ಥಹಳ್ಳಿ ತಾಲೂಕಿನ ನಾಲೂರು ಕೊಳಿಗೆ ಬಳಿ ಬರುತ್ತಿದ್ದಂತೆ ಡಸ್ಟರ್ ಕಾರಿನನ ಇಂಜಿನಲ್ಲಿ ದಿಢೀ‌ರ್ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಗುಡ್ಡಕ್ಕೆ ಢಿಕ್ಕಿ ಹೊಡೆದಿದೆ. ಕಾರು ನೋಡ ನೋಡುತ್ತಿದ್ದಂತೆಯೇ ಸಂಪೂರ್ಣವಾಗಿ ಹೊತ್ತಿ ಉರಿದಿದೆ.

ಘಟನೆ ಸಂಭವಿಸಿದಾಗ ಕಾರಿನಲ್ಲಿ ಚಾಲಕ ಒಬ್ಬರೇ ಇದ್ದು ಕೂಡಲೇ ಹೊರಬಂದಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಾಲಕನನ್ನ ಸೊರಬದ ಸುಹೇಲ್ ಎಂದು ಗುರುತಿಸಲಾಗಿದೆ. ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

- Advertisement -

Related news

error: Content is protected !!