Monday, June 15, 2026
spot_imgspot_img
spot_imgspot_img

ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ; ರೌಡಿಶೀಟರ್‌ನ ಮೇಲೆ ಫೈರಿಂಗ್

- Advertisement -
- Advertisement -

ಬಂಧಿಸಲು ಹೋದ ಪೊಲೀಸರ ಮೇಲೆ ಚಾಕುವಿಂದ ಹಲ್ಲೆಗೈಯ್ಯಲು ಮುಂದಾದ ರೌಡಿ ಶೀಟರ್ ಮೇಲೆ ಪೊಲೀಸರು ಫೈರಿಂಗ್ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ನಡೆದಿದೆ.

ರೌಡಿಶೀಟರ್ ಪೂರ್ಣೇಶ್ ಎಂಬುವರ ಮೇಲೆ ಎನ್ಆರ್‌ಪುರ ತಾಲೂಕಿನ ಬಾಳೆಹೊನ್ನೂರಿನ ಪೊಲೀಸರು ಫೈರಿಂಗ್ ನಡೆಸಿದ್ದಾರೆ.

ಈತನ ಮೇಲೆ ಹಲವಾಋಉ ಪ್ರಕರಣಗಳಿದ್ದು, ಕೋರ್ಟ್‌‌ಗೆ ಹಾಜರಾಗದೇ ಪೊಲೀಸರ ಕಣ್ತಪ್ಪಿಸಿ ಕಾಡು, ಕಾಫಿತೋಟ, ದೊಡ್ಡ-ದೊಡ್ಡ ಮರಗಳ ಮೇಲೆ ಮಲಗುತ್ತಿದ್ದ ಎನ್ನಲಾಗಿದೆ. ವಾರಂಟ್ ಜಾರಿಯಾಗಿದ್ದರೂ ಕೋರ್ಟ್‌ಗೆ ಹಾಜರಾಗದ ಪೂರ್ಣೇಶ್‌ನನ್ನು ಬಂಧಿಸಲು ಹೋದಾಗ ಆತ ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆ ಮಾಡಲು ಮುಂದಾಗಿದ್ದಾನೆ. ಆಗ ಪೊಲೀಸರು ಫೈರಿಂಗ್ ನಡೆಸಿದ್ದಾರೆ.

ಗಾಳಿಯಲ್ಲಿ ಎರಡು ಸುತ್ತು ಗುಂಡು ಹಾರಿಸಿದರೂ ಮಾತು ಕೇಳದ ಪೂರ್ಣೇಶ್ ಕಾಲಿಗೆ ಪಿ.ಎಸ್.ಐ ದಿಲೀಪ್ ಕುಮಾರ್ ಫೈರಿಂಗ್ ಮಾಡಿದ್ದಾರೆ. ಹಲ್ಲೆಗೊಳಗಾದ ಪೇದೆ ಮಂಜುನಾಥ್‌ನನ್ನು ಬಾಳೆಹೊನ್ನೂರು ಆಸ್ಪತ್ರೆಗೆ ದಾಖಲಿಸಿದ್ದು, ಆರೋಪಿ ಪೂರ್ಣೇಶ್‌ನನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು ಘಟನಾ ಸ್ಥಳಕ್ಕೆ ಎಸ್ಪಿ ವಿಕ್ರಮ್ ಅಮಟೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!