Monday, May 6, 2024
spot_imgspot_img
spot_imgspot_img

ದೇಶದ ಮೊದಲ ಸಂಯೋಜಿತ ಏರ್ ಆಂಬ್ಯುಲೆನ್ಸ್ ಗೆ ಚಾಲನೆ ನೀಡಿದ ಸಿಎಂ ಬಿಎಸ್ ವೈ.

- Advertisement -G L Acharya panikkar
- Advertisement -

ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ದೇಶದ ಮೊಟ್ಟ ಮೊದಲ ಸಂಯೋಜಿತ ಏರ್ ಆ್ಯಂಬುಲೆನ್ಸ್ ಸೇವೆಯನ್ನು ಮಂಗಳವಾರ ಅಧಿಕೃತವಾಗಿ ಉದ್ಘಾಟಿಸಿದರು.ಅವರು ನಗರದ ಜಕ್ಕೂರು ಪ್ರದೇಶದ ಏರೋಡ್ರೋಮ್‌ನಲ್ಲಿ ಈ ಸೇವೆಯನ್ನು ಲೋಕಾರ್ಪಣೆ ಮಾಡಿದರು.

ಕೊರೋನಾ ಸಂಕಷ್ಟದ ಅವಧಿಯಲ್ಲಿ ಗಂಭೀರ ಪರಿಣಾಮ ಅನುಭವಿಸುತ್ತಿರುವ ರೋಗಿಗಳನ್ನು ಶೀಘ್ರ ಆಸ್ಪತ್ರೆಗೆ ಸೇರಿಸಲು ಪೂರಕವಾಗುವಂತೆ ಈ ಏರ್ ಆಂಬ್ಯುಲೆನ್ಸ್ ಸೇವೆಯನ್ನು ರಾಜ್ಯದಲ್ಲಿ ಆರಂಭ ಮಾಡಲಾಗಿದೆ. ಈ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಡಾ: ಸಿ.ಎನ್.ಅಶ್ವತ್ಥ್ ನಾರಾಯಣ್, ಆರೋಗ್ಯ ಸಚಿವ ಬಿ. ಶ್ರೀರಾಮುಲು, ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ. ರವಿ. ಹಾಗೂ ಮೆ: ಐಸಿಎಟಿಟಿ ಕ್ಯಾತಿ ಏರ್ ಆಂಬ್ಯುಲೆನ್ಸ್ ಸರ್ವಿಸ್ ನ  ಸಿಇಒ ಡಾ: ಶಾಲಿನಿ ನಲ್ವಾಡ್ ಉಪಸ್ಥಿತರಿದ್ದರು.

- Advertisement -

Related news

error: Content is protected !!