ಮಂಗಳೂರು : ಕೊರೊನಾ ವೈರಸ್ ಸೋಂಕಿನ ಆತಂಕ ಇದೀಗ ಮೀನು ಮಾರಾಟಗಾರರಿಗೂ ತಟ್ಟಿದೆ. ಕರಾವಳಿಯಲ್ಲಿ ಮೀನು ಮಾರಾಟಗಾರರಿಗೆ ಸೋಂಕು ದೃಢ ಪಟ್ಟಿದೆ. ಈ ಹಿನ್ನೆಲೆಯಲ್ಲೀಗ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ 10 ದಿನಗಳ ಕಾಲ ಮೀನು ಮಾರಾಟವನ್ನೇ ಸ್ಥಗಿತಗೊಳಿಸಲಾಗುತ್ತಿದೆ.
ಮನೆ ಮನೆಗೆ ತೆರಳಿ ಮೀನು ಮಾರಾಟ ಮಾಡುತ್ತಿದ್ದ ವ್ಯಕ್ತಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಮಾತ್ರವಲ್ಲ ಮೀನು ಮಾರಾಟ ಮಾಡುತ್ತಿದ್ದ ಕೆಲವರಿಗೆ ಶಂಕಿತ ಕೊರೊನಾ ಲಕ್ಷಣಗಳು ಕಂಡು ಬಂದಿದ್ದು, ವರ್ತರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೀಗಾಗಿ ಮೀನು ಮಾರಾಟಗಾರರಿಗೂ ಕೊರೊನಾ ಆಂತಕ ಎದುರಾಗಿದೆ. ಮೀನು ಮಾರಾಟಗಾರರಿಗೆ ಕೊರೊನಾ ಸೋಂಕು ದೃಢಪಟ್ಟ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಮೀನು ಮಾರಾಟವನ್ನು ಸ್ಥಗಿತಗೊಳಿಸಲಾಗುತ್ತಿದೆ.
ಮೀನುಗಾರಿಕಾ ಧಕ್ಕೆಯಲ್ಲಿ ಸುಮಾರು 10 ದಿನಗಳ ಕಾಲ ಚಿಲ್ಲರೆ ಹಾಗೂ ಹೋಲ್ ಸೇಲ್ ಮೀನು ಮಾರಾಟ ಸಂಪೂರ್ಣವಾಗಿ ಸ್ಥಗಿತವಾಗಲಿದೆ. ಅಲ್ಲದೇ ಉಳ್ಳಾಲ, ಕೋಟೆಪುರ, ಹೊಯ್ಗೆ ಬಜಾರ್, ಬೇಂದ್ರೆ, ಫರಂಗಿ ಪೇಟೆ, ವಿ.ಆರ್.ಎಲ್, ಕುದ್ರೋಳಿ, ಕಲ್ಲಾಪಿ ಹಾಗೂ ಮಾರಿಪಲ್ಲ ಸೇರಿದಂತೆ ಹಲವು ಕಡೆಗಳಲ್ಲಿ ವರ್ತರು ಅನಧಿಕೃತವಾಗಿ ಮೀನು ಮಾರಾಟ ಮಾಡುವುದಕ್ಕೆ ನಿಷೇಧ ಹೇರುವಂತೆ ಮೀನು ಮಾರಾಟಗಾರರ ಸಂಘದ ಕಾರ್ಯಾಧ್ಯಕ್ಷ ಕೆ.ಅಶ್ರಫ್ ಆಗ್ರಹಿಸಿದ್ದಾರೆ.